ಮೂಡಲಗಿ ಪುರಸಭೆ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

Must Read

ಮೂಡಲಗಿ: ಕಾರ್ಮಿಕ ಇಲಾಖೆಯಿಂದ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್‍ಗಳನ್ನು ಅರಭಾಂವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನದಂತೆ ವಿತರಿಸಲಾಯಿತು ಎಂದು ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಹೇಳಿದರು.

ಸೋಮವಾರದಂದು ಪಟ್ಟಣದ ಪುರಸಭೆ ಆವರಣದಲ್ಲಿ ಪುರಸಭೆ ಕಾರ್ಮಿಕರಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಒಳಗೊಂಡಂತೆ ವಿವಿಧ ವೃತ್ತಿಯಲ್ಲಿರುವ ಬಡವರಿಗೆ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಹಾಗೂ ಸರ್ಕಾರ ಸ್ಪಂದಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮಾತನಾಡಿ, ಶಾಸಕರ ಜನೋಪಯೋಗಿ ಕಾರ್ಯಕ್ರಮಗಳನ್ನು ವಿವರಿಸಿದರು. ಕೋವಿಡ್ ಎರಡನೇ ಅಲೆಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆಂದು ಹೇಳಿದರು.

ತಹಶೀಲ್ದಾರ ಡಿ.ಜಿ.ಮಹಾತ್ ಹಾಗೂ ಕಾರ್ಮಿಕ ಇಲಾಖೆಯ ನಿರೀಕ್ಷಕ ಪಾಂಡುರಂಗ ಮಾವರಕರ ಮಾತನಾಡಿ, ರಾಜ್ಯ ಕಾರ್ಮಿಕ ಇಲಾಖೆಯಿಂದ ನೀಡುವ ಕಾರ್ಮಿಕ ಕಾರ್ಡಿನಿಂದ ಅನೇಕ ಉಪಯೋಗಗಳಿವೆ. ಇದನ್ನು ಅರಿತು ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರೂ ಕೂಡ ಕಾರ್ಡಿಗೆ ಅರ್ಜಿ ಸಲ್ಲಿಸಿ ಇಲಾಖೆಯ ಯೋಜನೆಗಳ ಉಪಯೋಗ ಪಡೆಯಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ದೀಪಕ್ ಹರ್ದಿ, ತಾಪಂ ಸಹಾಯಕ ನಿರ್ದೇಶಕ ಎಸ್.ಎಸ್. ರೊಡ್ಡನವರ. ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಹಾಗೂ ಪುರಸಭೆ ಸದಸ್ಯರು ಮತ್ತಿತರು ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group