ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಕ್ರೆಡಿಟ್ ಆಕ್ಸಿಸ್ ನಿಂದ ಮಾಸ್ಕ್ ಮತ್ತು ಸ್ಯಾನಿಟೈಜರ್ ವಿತರಣೆ

Must Read

ಸಿಂದಗಿ : ದೇವರಹಿಪ್ಪರಗಿ, ಆಲಮೇಲ ಹಾಗೂ ಸಿಂದಗಿ ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ಸಿಂದಗಿ ಶಾಖೆಯಿಂದ ಮಾಸ್ಕ್ ಮತ್ತು ಸ್ಯಾನಿಟೈಜರ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ವಲಯ ವ್ಯವಸ್ಥಾಪಕ ಉಮೇಶ ಸುಕ್ಕದ, ಶಾಖಾ ವ್ಯವಸ್ಥಾಪಕ ಲಕ್ಷ್ಮಣ ಹೊಸಮನಿ ಮಾತನಾಡಿ, ಕೊರೋನಾ ಎರಡನೇಯ ಅಲೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ಆರೋಗ್ಯ ಇಲಾಖೆ, ಪುರಸಭೆ, ಪೊಲೀಸ್ ಇಲಾಖೆ ಸೇರಿದಂತೆ ಪ್ರತಿನಿತ್ಯ ತಮ್ಮ ಜೀವನದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ನಮ್ಮ ಶಾಖೆಯಿಂದ ರಾಜ್ಯದ ಎಲ್ಲ ಪೊಲೀಸ್ ಠಾಣೆಯ ಪ್ರತಿಯೊಂದು ಸಿಬ್ಬಂದಿಗೂ ಸ್ಯಾನಿಟೈಜರ್ ಮತ್ತು ಮಾಸ್ಕ್ ನೀಡಲಾಗುತ್ತಿದ್ದು ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದರೊಂದಿಗೆ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಮಾತ್ರ ಕೋರೋನಾ ರೋಗವನ್ನು ಹೊಡೆದೊಡಿಸಲು ಸಹಕಾರಿಯಾಗುತ್ತದೆ ಎಂದರು.

ಶಾಖೆಯ ಸಿಬ್ಬಂದಿಗಳಾದ ಶ್ರೀಶೈಲ ಮಾಡಗ್ಯಾಳ, ಸದ್ದಾಂ ಬೇಪಾರಿ, ಮಲ್ಲನಗೌಡ ಪಾಟೀಲ, ಯಲ್ಲಪ್ಪ ದಶವಂತ, ಅಕ್ಬರ್ ಮುಲ್ಲಾ, ಮಲ್ಲಿಕಾರ್ಜುನ ತೋನಶಾಳ, ಮಲಕಪ್ಪ ಗಂಗನಳ್ಳಿ, ಅನೀಲ ಸೇರಿದಂತೆ ಇನ್ನಿತರರು ಇದ್ದರು.

Latest News

ಲೇಖನ : ಒತ್ತಡದ ಬದುಕಿಗೆ ನೆಮ್ಮದಿಯ ಔಷಧಿ

ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ನಮ್ಮ ಹಿಂದಿನ ಹಿರಿಯರು ಪಡುತ್ತಿದ್ದ ಶ್ರಮಜೀವನ ಈಗಿಲ್ಲ. ಆದರೂ ವರ್ಗ ವಯಸ್ಸು ಲಿಂಗಭೇದವನ್ನು ಲೆಕ್ಕಿಸದೇ ದಿನದಿಂದ ದಿನೇ ಒತ್ತಡ ಹೆಚ್ಚುತ್ತಲೇ ಇದೆ. ಶಾಂತವಿರಬೇಕೆನ್ನುವ...

More Articles Like This

error: Content is protected !!
Join WhatsApp Group