ಪೊಲೀಸ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಯವರಿಗೆ ಸ್ಟೀಮರ್ ಮತ್ತು ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಸವದತ್ತಿ: ಕೋರೋನಾ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯವರ ಆರೋಗ್ಯ ರಕ್ಷಣೆ ಅತ್ಯವಶ್ಯವಾಗಿದ್ದು, ಅವರಿಗೆ ರೋಗ ನಿರೋಧಕ ಶಕ್ತಿಯನ್ನು ವೃದ್ದಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಮುಖ್ಯ” ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಯುವ ಭಾರತ ಸವದತ್ತಿಯ ಸೋದರ ಸಂಘಟನೆಯಾದ ಡಾ. ಮಲ್ಲಿಕಾರ್ಜುನ ಬಾಳಿಕಾಯಿ ನೇತೃತ್ವದ ನಿರಾಮಯ ಫೌಂಡೇಶನ್ ವತಿಯಿಂದ ಪೊಲೀಸ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಯವರಿಗೆ ಸ್ಟೀಮರ್ ಮತ್ತು ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿ ಅವರು ಮಾತನಾಡಿದರು.

“ಕೊರೋನಾ ಮಹಾಮಾರಿಯ ಹಿಡಿತದಿಂದ ದೇಶವನ್ನು ಗೆಲ್ಲಿಸುವ ಉದ್ದೇಶದಿಂದ ಹಾಗೂ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸೈನಿಕರಂತೆ ಹಗಲಿರುಳು ತಮ್ಮ ಜೀವನವನ್ನೇ ಪಣಕ್ಕಿಟ್ಟು ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಆರಕ್ಷಕ ಬಂಧುಗಳ ಆರೋಗ್ಯದ ಕುರಿತು ಕಾಳಜಿ ತೆಗೆದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ” ಎಂದರು.
ಪಿಎಸ್‍ಐ ಶಿವಾನಂದ ಗುಡಗನಟ್ಟಿ ಮಾತನಾಡಿ, “ಸವದತ್ತಿ ತಾಲೂಕಿನಾದ್ಯಂತ ಸಾರ್ವಜನಿಕರು ಸಹಕಾರ ನೀಡುವದರ ಜೊತೆಗೆ ಲಾಕ್‍ಡೌನ್ ಪರಿಣಾಮಕಾರಿಯಾಗಿ ಯಶಸ್ವಿಯಾಗಿಸಿದ್ದಾರೆ”ಎಂದರು.

- Advertisement -

“ಪೊಲೀಸ್ ವ್ಯವಸ್ಥೆಗೆ ಸ್ಪಂಧಿಸುವದರೊಂದಿಗೆ ಯಾವುದೇ ದುಷ್ಪರಿಣಾಮಕ್ಕೆ ಅವಕಾಶ ನೀಡದೆ ಕೋರೋನಾ ನಿಯಂತ್ರಣಕ್ಕೆ ಜನರ ಸಹಕಾರ ನಮಗೆ ಸ್ಪೂರ್ತಿ ನೀಡಿದೆ.. ನಮಗೆ ನೀಡುತ್ತಿರುವ ಸ್ಟೀಮರ್ ಮತ್ತು ಮಾಸ್ಕ್ ಗಳು ಪೊಲೀಸ್ ಸಿಬ್ಬಂದಿಯ ಆರೋಗ್ಯ ರಕ್ಷಣೆಗೆ ಅನುಕೂಲಕರವಾಗಲಿವೆ” ಎಂದರು.

ಡಿಎಚ್‍ಓ ಮಹೇಶ ಚಿತ್ತರಗಿ, ಮುಖ್ಯಾಧಿಕಾರಿ ಪ್ರಕಾಶ ಚೆನ್ನಪ್ಪನವರ, ನಿರಾಮಯದ ಸಹ ಸಂಚಾಲಕರಾದ ಅರುಣ ಮಡಿವಾಳರ, ಕಾರ್ಯಕರ್ತರುಗಳಾದ ನಾರಾಯಣ ಈಳಿಗೇರ, ಮಹಾಂತೇಶ ಗುರನ್ನವರ, ಸುನೀಲ ಪಾರ್ವತಿ, ಸುನೀಲ ಗೊರವನಕೊಳ್ಳ, ಹುಸೇನ್ ದೊಡವಾಡ, ವೀರಣ್ಣ ಚೌಗಲ, ಅಕ್ಷಯ ಕಟ್ಟಿಮನಿ, ಸಂಜು ಹೊಸೂರ, ಶಂಕರ ಹೂಲಿಕಟ್ಟಿ ಮತ್ತು ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!