ಐಬಿಪಿಎಸ್ ಪರೀಕ್ಷೆ ಕನ್ನಡ ಮಾಧ್ಯಮದಲ್ಲಿ ಇಲ್ಲದಿರುವುದಕ್ಕೆ ಜಿಲ್ಲಾ ಕ.ಸಾ.ಪ. ಆಕ್ರೋಶ

Must Read

ಬೈಲಹೊಂಗಲ – ರಾಷ್ಟ್ರೀಕೃತ ಬ್ಯಾಂಕುಗಳಿಗೆ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು, ಪರೀಕ್ಷೆ ನಡೆಸುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಕುರಿತು, ಮಲತಾಯಿ ಧೋರಣೆ ಮುಂದುವರೆಸಿದ್ದು, ಹಿಂದಿ ಹಾಗೂ ಇಂಗ್ಲೀಷನಲ್ಲಿಯೇ ಪರೀಕ್ಷೆ ನಡೆಸಲು ನಿರ್ಧರಿಸಿರುವುದನ್ನು ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಕನ್ನಡ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಬೆಳಗಾವಿ ಕಸಾಪ ಅಧ್ಯಕ್ಷರು ಆಗ್ರಹಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಎದುರು ಹಾರಿಸಲಾಗಿರುವ ಕನ್ನಡ ಧ್ವಜ ಹರಿದು ಹೋಗಿದ್ದು, ಅದನ್ನು ಬದಲಾಯಿಸಿ ಹೊಸ ಕನ್ನಡ ಧ್ವಜ ಹಾರಿಸುವಂತೆ ಆಗ್ರಹಿಸಿ, ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾವಿ ಏಕಾಂಗಿ ಹೋರಾಟ ನಡೆಸಿದರು. ಇವರಿಗೆ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆಯ ಸಂಪೂರ್ಣ ಬೆಂಬಲ ಇರುತ್ತದೆ ಎಂದು ಕ.ಸಾ.ಪ.ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಂಗಲಾ ಶ್ರೀ. ಮೆಟಗುಡ್ಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಲದೇ ಮಹಾನಗರ ಪಾಲಿಕೆಯು ಕೂಡಲೇ ಹೊಸ ಕನ್ನಡ ಧ್ವಜವನ್ನು ಹಾರಿಸಬೇಕೆಂದು ಆಗ್ರಹಿಸಿದ್ದಾರೆ.

Latest News

ಐತಿಹಾಸಿಕ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ಒಂದು ಭೇಟಿ

ನಾವು ಶಿರಸಿಯಿಂದ ಬನವಾಸಿ ಬಸ್ಸು ಹತ್ತಿದಾಗಲೇ ನಾಲ್ಕೂವರೆ ಆಗಿತ್ತು. ಶಾಲೆ ಬಿಡುವ ವೇಳೆ ಬಸ್ ರಷ್ ಆಗಿತ್ತು. ಬನವಾಸಿಯಲ್ಲಿ ಇಳಿದಾಗ ಐದೂವರೆ ಆಗಿತ್ತು. ಕ್ಯಾಂಟಿನ್‌ನಲ್ಲಿ ಟೀ...

More Articles Like This

error: Content is protected !!
Join WhatsApp Group