ಬೆಳಗಾವಿ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ ಬೆಳಗಾವಿಯಲ್ಲಿ ಜರುಗಿತು.ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಜಯಕುಮಾರ ಹೆಬಳಿಯವರ ಅಧ್ಯಕ್ಷತೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಅವುಗಳಲ್ಲಿ ಪ್ರಮುಖವಾಗಿ ನೂತನ ಪಿಂಚಣಿ ಯೋಜನೆ ಸಮಸ್ಯೆ ರದ್ದು ಕುರಿತು, ಎರಡು ಮಕ್ಕಳ ಕುಟುಂಬಗಳಿಗೆ ನೀಡುವ ಸೌಲಭ್ಯ ಸಮಸ್ಯೆ ಪ್ರಧಾನ ಗುರುಗಳ ಪ್ರಭಾರಿ ಭತ್ಯೆ, 30 ಗಳಿಕೆ ರಜೆ, ವೈದ್ಯಕೀಯ ಬಿಲ್ ಸಮಸ್ಯೆ ಇನ್ನೂ ಹಲವಾರು ಸಮಸ್ಯೆಗಳ ಬಗ್ಗೆ ವಿಸ್ತ್ರತವಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಮತ್ತು ನಾಮ ನಿರ್ದೇಶಿತ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನೂತನವಾಗಿ ಸವದತ್ತಿ ತಾಲೂಕಾ ಅಧ್ಯಕ್ಷರಾಗಿ ಆಯ್ಕೆಯಾದ ಹನಮಂತ ಪೆಟ್ಲೂರ ಹಾಗೂ ಬೆಳಗಾವಿ ಗ್ರಾಮೀಣ ಅಧ್ಯಕ್ಷರಾದ ಪ್ರಕಾಶ ದೇಯನ್ನವರ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.
ನಂತರ ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಕಾರ್ಯಕಾರಿಣಿ ಸಭೆಯ ಕುರಿತು ಹಾಗೂ ತಾಲೂಕಿನ ಸಮಸ್ಯೆಗಳ ಬಗ್ಗೆ ಮಾತನಾಡಿದರು.
ಸಭೆಯಲ್ಲಿ ಎಲ್ಲಾ ತಾಲೂಕಿನ ಅಧ್ಯಕ್ಷರು ಮತ್ತು ಪ್ರದಾನ ಕಾರ್ಯದರ್ಶಿ ಗಳಿಗೆ ಈ ವರ್ಷದ ಚೆಕ್ ವಿತರಿಸಲಾಯಿತು.ಹಾಗೂ ಇದೇ ತಿಂಗಳ 29-9-2021 ರಂದು ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಬೆಳಗಾವಿಯಲ್ಲಿ ಆಯೋಜಿಸುವ ಕುರಿತು ರೂಪರೇಷೆಯನ್ನು ಮಾಡಲಾಯಿತು.
ಜಿಲ್ಲಾ ಸಂಘದ ಕಾರ್ಯದರ್ಶಿ ರಮೇಶ್ ಗೋಣಿ ಸರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾವಿತ್ರಿ ತಳವಾರ ವಂದಿಸಿದರು.