spot_img
spot_img

ಜೀನಿಯಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಮತ್ತು ಫನ್‍ಫೇರ್

Must Read

- Advertisement -

ಮೈಸೂರು – ಮೈಸೂರಿನ ವರ್ತುಲ ರಸ್ತೆಯ ದೇವೆಗೌಡ ವೃತ್ತದಲ್ಲಿರುವ ಕೆ.ಬಿ.ಎಲ್ ಬಡಾವಣೆಯ ಜೀನಿಯಸ್‍ ಕಾಲೇಜಿನಲ್ಲಿ ಜಿಲ್ಲಾಮಟ್ಟದ ವಾಲಿಬಾಲ್ ಮತ್ತು ಫನ್‍ಫೇರ್‍ ಕಾರ್ಯಕ್ರಮವನ್ನು ದಿ. 30 ರಂದು ನಡೆಸಲಾಯಿತು.

ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದ ದಕ್ಷಿಣ ಶಿಕ್ಷಕರ ಕ್ಷೇತ್ರದ ಶಾಸಕರಾದ ಮರಿತಿಬ್ಬೇಗೌಡರವರು ಮಾತನಾಡಿ, ಇಂದು ಹುತಾತ್ಮರ ದಿನ, ಆದ್ದರಿಂದ ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿಯವರನ್ನು ಸ್ಮರಿಸುವುದು ನಮ್ಮೆಲ್ಲರಕರ್ತವ್ಯ. ತ್ಯಾಗ ಬಲಿದಾನದಿಂದ ನಮಗೆ ಸ್ವಾಂತಂತ್ರವನ್ನು ತಂದುಕೊಟ್ಟಿದ್ದಾರೆ. ನನ್ನ ಜೀವನವೇ ನನ್ನ ಸಂದೇಶ ಎಂದು ಸಾರಿದ ರಾಷ್ಟ್ರಪಿತರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರು ಭಾರತಕ್ಕೆ ವಿಶಿಷ್ಟವಾದ ಸಂವಿಧಾನವನ್ನು ರಚಿಸಿ ಸಮಾನತೆಯನ್ನು ತಂದವರು. ಇಂದು ಸಂವಿಧಾನವನ್ನು ಇಡೀ ವಿಶ್ವವೇ ಗೌರವಿಸುತ್ತಿರುವುದು ನಮಗೆ ಸಂತಸ ತಂದಿದೆ ಎಂದರು.

ಕ್ರೀಡೆ ಮನುಷ್ಯನಿಗೆ ಆರೋಗ್ಯವನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಪ್ರತಿನಿತ್ಯವೂ ಬೆಳಿಗ್ಗೆ ಮತ್ತು ಸಂಜೆ ದೈಹಿಕ ಕ್ರೀಡೆಗಳಲ್ಲಿ ತೊಡಗಬೇಕೆಂದು ಕರೆ ನೀಡಿದರು.

- Advertisement -

ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುರೇಖಾ ಪ್ರಭು ಎನ್‍ ರವರು ಮಾತನಾಡಿ, ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ದೈಹಿಕ ಮೌಲ್ಯದೊಂದಿಗೆ ಸಧೃಡ ಶರೀರವನ್ನು ಹೊಂದುವಂತೆ ಮಾಡುತ್ತದೆ. ಆದ್ದರಿಂದ ಕಾಲೇಜಿನ ವಿದ್ಯಾರ್ಥಿಗಳು ಬಿಡುವಿನ ವೇಳೆಯಲ್ಲಿ ಕ್ರೀಡಾ ಚಟುವಟಿಕೆಯಲ್ಲಿ ತೊಡಗುವುದು ಒಳ್ಳೆಯದೆಂದು ತಿಳಿಸಿದರು.     

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಹೆಚ್.ಆರ್.ಸುರೇಶ್‍ರವರು ವಹಿಸಿ ಮಾತನಾಡಿ, ಪಠ್ಯ ಚಟುವಟಿಕೆಗಳು ಎಷ್ಟು ಮುಖ್ಯವೋ ಅಷ್ಟೇ ಸಹಪಠ್ಯ ಚಟುವಟಿಕೆಗಳಾದ ಕ್ರೀಡೆ, ನೃತ್ಯ, ಸಂಗೀತ, ನಾಟಕ, ಸಾಹಿತ್ಯ, ವ್ಯಾಯಾಮ ವಿದ್ಯಾರ್ಥಿ ಜೀವನದಲ್ಲಿ ಮುಖ್ಯವಾಗಿರುತ್ತದೆ. ಮಾನಸಿಕ ಒತ್ತಡವನ್ನು ನಿಯಂತ್ರಿಸಬೇಕಾದರೆ ಕ್ರೀಡಾ ಚಟುವಟಿಕೆಗಳು ಪೂರಕವಾಗುತ್ತದೆ ಮತ್ತು ಆರೋಗ್ಯವನ್ನು ಸಮತೋಲನದಲ್ಲಿ ಇಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.   

ನಂತರ ನಡೆದ ಜಿಲ್ಲಾ ಮಟ್ಟದ ಅಂತರಕಾಲೇಜು ವಾಲಿಬಾಲ್ ಹಾಗೂ ಫನ್‍ಪೇರ್ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

- Advertisement -

ಜೀನಿಯಸ್ ಕಾಲೇಜಿನಲ್ಲಿ ಜಿಲ್ಲಾಮಟ್ಟದ ವಾಲಿಬಾಲ್ ಮತ್ತು ಫನ್‍ಫೇರ್ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯರಾದ ಮರಿತಿಬ್ಬೇಗೌಡರವರವರಿಗೆ ಸನ್ಮಾನ ಮಾಡಲಾಯಿತು.

ಮೈಸೂರಿನ ಜೀನಿಯಸ್ ಪಿಯು ಕಾಲೇಜಿನ ಆವರಣದಲ್ಲಿಂದು ಜಿಲ್ಲಾ ಮಟ್ಟದ ವಾಲಿಬಾಲ್ ಹಾಗೂ ಫನ್‍ಫೇರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅವರನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುರೇಖಾ ಪ್ರಭು ಎನ್. ಅವರು ಸನ್ಮಾನಿಸಿ, ಗೌರವಿಸಲಾಯಿತು. ಸಂಸ್ಥೆಯ ಸದಸ್ಯರಾದ ನವ್ಯ, ನಿಶಾಂತ್, ಕಾಲೇಜಿನ ಪ್ರಾಂಶುಪಾಲರಾದ ಹೆಚ್.ಆರ್.ಸುರೇಶ್ ಉಪಸ್ಥಿತರಿದ್ದರು.

- Advertisement -
- Advertisement -

Latest News

ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಬೇಕು- ಸಿಡಿಪಿಓ ಶ್ವೇತಾ

ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
- Advertisement -

More Articles Like This

- Advertisement -
close
error: Content is protected !!
Join WhatsApp Group