ಮೂಡಲಗಿ -_ಬೆಳಗಾವಿ ಜಿಲ್ಲಾ ೧೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಅ.೨೧ರಂದು ಸೋಮವಾರ ಸಂಜೆ ೪ ಗಂಟೆಗೆ ಶ್ರೀ ಶಿವಬೋಧರಂಗ ಸಿದ್ದ ಸಂಸ್ಥಾನ ಮಠದಲ್ಲಿ ನಡೆಯಲಿದೆ.
ಸಭೆಯ ಸಾನ್ನಿಧ್ಯವನ್ನು ಶ್ರೀ ದತ್ತಾತ್ರಯಬೋಧ ಸ್ವಾಮಿಗಳು ವಹಿಸುವರು. ಅರಬಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಜಿಲ್ಲಾ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯದರ್ಶಿ ಹಾಗೂ ಮೂಡಲಗಿ ತಾಲೂಕಾ ಕಸಾಪ ಅಧ್ಯಕ್ಷ ಡಾ.ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಪೂರ್ವಭಾವಿ ಸಭೆಗೆ ಚುನಾಯಿತ ಪ್ರತಿನಿದಿಗಳು, ತಾಲೂಕಾ ಅಧಿಕಾರಿಗಳು, ಪುರಸಭೆ ಅಧ್ಯಕ್ಷೆ-ಉಪಾಧ್ಯಕ್ಷೆ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗ, ತಾಲೂಕಿನ ಎಲ್ಲ ಕನ್ನಡಪರ ಸಂಘಟನೆಗಳು, ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಯುವಕ, ಯುವತಿ ಮಂಡಳದ ಸದಸ್ಯರು, ಸ್ವಸಹಾಯ ಸಂಘಗಳ ಸದಸ್ಯರುಗಳು, ಸಹಕಾರಿ ಸಂಘಗಳ ಅಧ್ಯಕ್ಷ-ಉಪಾಧ್ಯಕ್ಷರು ಹಾಗೂ ಸದಸ್ಯರು, ಪತ್ರಕರ್ತರು ಮತ್ತು ಕನ್ನಡಾಭಿಮನಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ತಿಳಿಸಿದ್ದಾರೆ.