ಬೆಳಗಾವಿ: ವಿಧಾನಸೌಧದ ಸೆಂಟ್ರಲ್ ಹಾಲ್ ನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14 ನೇ ಘಟಿಕೋತ್ಸವದಲ್ಲಿ ಸವದತ್ತಿ ತಾಲೂಕಿನ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾದ ವೈ. ಬಿ. ಕಡಕೋಳ ಅವರು ಮಹೇಶ ಗಾಜಪ್ಪನವರ ಮಾರ್ಗದರ್ಶನ ದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು ಸಮಗ್ರ ಅಧ್ಯಯನ ಸಮಗ್ರ ಅಧ್ಯಯನ ಪ್ರಬಂಧಕ್ಕೆ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಡಾಕ್ಟರೇಟ್ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಲಾಧಿಪತಿಗಳಾದ ಪ್ರೊ ಸಿ. ಎಂ. ತ್ಯಾಗರಾಜ.ಕುಲಸಚಿವ ಸಂತೋಷ, ಕಾಮಗೌಡರ, ಇಸ್ರೋದ ಮಾಜಿ ಅಧ್ಯಕ್ಷರಾದ ಎ.ಎಸ್. ಕಿರಣಕುಮಾರ್, ಮೌಲ್ಯಮಾಪನ ಕುಲಸಚಿವ ಪ್ರೊ. ಡಿ. ಎನ್. ಪಾಟೀಲ, ಹಣಕಾಸು ಅಧಿಕಾರಿ ಎಂ. ಎ. ಸ್ವಪ್ನ, ವಿಶ್ವವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿವಿಧ ವಿಷಯದಲ್ಲಿ ಡಾಕ್ಟರೇಟ್ ಪಡೆದ 28 ರ್ಯಾಂಕ್ ಪಡೆದ 125, ಚಿನ್ನದ ಪದಕ 28 ಮೂರು ಜನ ಗೌರವಾನ್ವಿತರಿಗೆ ಅವರ ಸಾಧನೆ ಗಮನಿಸಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಕುಲಾಧಿಪತಿಗಳಾದ ಪ್ರೊ. ಸಿ. ಎಂ. ತ್ಯಾಗರಾಜ ಪ್ರಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರ ಕಟ್ಟುವಲ್ಲಿ ಯುವಕರ ಪಾತ್ರ ಮಹತ್ವದ್ದು.ಬಲಿಷ್ಠ ಭಾರತ ನಿರ್ಮಾಣ ಕ್ಕೆ ಕೈ ಜೋಡಿಸಬೇಕು ಎಂದು ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಕರೆ ನೀಡಿದರು.

