spot_img
spot_img

ಮಹಾದೇವ ಕುಲಮೂರ ಅವರಿಗೆ ಡಾಕ್ಟರೇಟ್ ಪದವಿ

Must Read

spot_img
- Advertisement -

ಮೂಡಲಗಿ: ಹಂಪಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಹೊಂದಿರುವ ಹಾರೂಗೇರಿಯ ಬಿ.ಆರ್. ದರೂರ ಸಂಶೋಧನ ಕೇಂದ್ರದ ಅಭಿವೃದ್ಧಿ ಅಧ್ಯಯನ ವಿಭಾಗವು ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಮಹಾದೇವ ಕುಲಮೂರ ಅವರು ಮಂಡಿಸಿದ ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಕೃಷಿ ಅಭಿವೃದ್ಧಿ’ ವಿಷಯದ ಸಂಶೋಧನಾ ಮಹಾಪ್ರಬಂಧಕ್ಕೆ ಪಿ.ಎಚ್‍ಡಿ. (ಡಾಕ್ಟರೇಟ್) ಪದವಿ ಪ್ರಧಾನ ಮಾಡಿದೆ.

ಇವರಿಗೆ ಬಿ.ಆರ್. ದರೂರ ಸಂಶೋಧನ ಕೇಂದ್ರದ ಅಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಸಿ.ಆರ್. ಗುಡಸಿ ಅವರು ಮಾರ್ಗದರ್ಶನ ನೀಡಿದ್ದರು.

ಮಹಾದೇವ ಕುಲಮೂರ ಅವರನ್ನು ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ, ಅಡಳಿತ ಮಂಡಳಿಯವರು ಮತ್ತು ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಹಾಗೂ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

- Advertisement -
- Advertisement -

Latest News

ಜೀವನದಲ್ಲಿ ಶಿಕ್ಷಣದಂತೆ ಸಂಸ್ಕಾರ ಕೂಡಾ ಅಷ್ಟೇ ಅವಶ್ಯಕವಾಗಿದೆ -ಮುಕುಂದ ಮಹಾರಾಜರು

ಮೂಡಲಗಿ:-ಪ್ರತಿಯೊಬ್ಬರಿಗೂ ಶಿಕ್ಷಣ ಎಷ್ಟು ಅವಶ್ಯಕವಾಗಿದೆಯೋ,ಸಂಸ್ಕಾರ ಕೂಡಾ ಅಷ್ಟೇ ಮುಖ್ಯವಾಗಿದೆ ಎಂದು ಮುಕುಂದ ಮಹಾರಾಜರು ಹೇಳಿದರು. ತಾಲೂಕಿನ ಗುಜನಟ್ಟಿ ಗ್ರಾಮದ ಶ್ರೀ ಮಾಧವಾನಂದ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ...
- Advertisement -

More Articles Like This

- Advertisement -
close
error: Content is protected !!
Join WhatsApp Group