- Advertisement -
ಮೂಡಲಗಿ: ಹಂಪಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಹೊಂದಿರುವ ಹಾರೂಗೇರಿಯ ಬಿ.ಆರ್. ದರೂರ ಸಂಶೋಧನ ಕೇಂದ್ರದ ಅಭಿವೃದ್ಧಿ ಅಧ್ಯಯನ ವಿಭಾಗವು ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಮಹಾದೇವ ಕುಲಮೂರ ಅವರು ಮಂಡಿಸಿದ ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಕೃಷಿ ಅಭಿವೃದ್ಧಿ’ ವಿಷಯದ ಸಂಶೋಧನಾ ಮಹಾಪ್ರಬಂಧಕ್ಕೆ ಪಿ.ಎಚ್‍ಡಿ. (ಡಾಕ್ಟರೇಟ್) ಪದವಿ ಪ್ರಧಾನ ಮಾಡಿದೆ.
ಇವರಿಗೆ ಬಿ.ಆರ್. ದರೂರ ಸಂಶೋಧನ ಕೇಂದ್ರದ ಅಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಸಿ.ಆರ್. ಗುಡಸಿ ಅವರು ಮಾರ್ಗದರ್ಶನ ನೀಡಿದ್ದರು.
ಮಹಾದೇವ ಕುಲಮೂರ ಅವರನ್ನು ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ, ಅಡಳಿತ ಮಂಡಳಿಯವರು ಮತ್ತು ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಹಾಗೂ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.