ಡಾ. ಬಿದಾನ್ ಚಂದ್ರ ರಾಯ್ ನೆನಪಿಗೆ ವೈದ್ಯರ ದಿನ ಆಚರಣೆ

Must Read

ರಾಷ್ಟ್ರೀಯ ವೈದ್ಯರ ದಿನಾಚರಣೆ

ಕೊರೋನಾ ವೈರಸ್ ಕಾರಣದಿಂದ ಹಾಗೂ ಇತ್ತೀಚೆಗೆ ಬರುತ್ತಿರುವ ಹತ್ತು ಹಲವು ವಿವಿಧ ರೀತಿಯ ಕಾಯಿಲೆಗಳಿಂದ ಇಡೀ ವಿಶ್ವವೇ ಕಂಗಾಲಾಗಿರುವ ಈ ಸಂದರ್ಭದಲ್ಲಿ ಎಲ್ಲರ ಪಾಲಿಗೂ ದೇವರಾಗಿ ಕಾಣುತ್ತಿರುವುದು ವೈದ್ಯರು. ಹಾಗಾಗಿ ಇಡೀ ವೈದ್ಯ ಸಮೂಹಕ್ಕೆ ನಮ್ಮ ಸಮಾಜ ಕೃತಜ್ಞರಾಗಿರಬೇಕು. ಈ ಜುಲೈ 1 ವೈದ್ಯರಿಗೆ ಕೃತಜ್ಞತೆ ಸಲ್ಲಿಸುವುದಕ್ಕೆ ಮೀಸಲಾದರೆ ಅದೇ ಈ ದಿನದ ಸಾರ್ಥಕತೆಯಾಗಲಿದೆ.

ಭಾರತದಲ್ಲಿ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಅದಕ್ಕೊಂದು ಕಾರಣವೂ ಇದೆ. ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿದ್ದ ಡಾ. ಬಿದಾನ್ ಚಂದ್ರ ರಾಯ್ ಅವರ ನೆನಪಲ್ಲಿ ಜುಲೈ 1 ನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ.

ಅವರೊಬ್ಬ ಅಸಾಧಾರಣ ವೈದ್ಯರಾಗಿದ್ದವರು. ಅವರ ಗಣನೀಯ ಸೇವೆಯನ್ನು ಪರಿಗಣಿಸಿ 1961 ರ ಫೆಬ್ರವರಿ 4 ರಂದು ಕೇಂದ್ರ ಸರ್ಕಾರ “ಭಾರತ ರತ್ನ” ಪ್ರಶಸ್ತಿ ನೀಡಿತ್ತು. ಕುತೂಹಲಕರ ವಿಚಾರವೆಂದರೆ ಅವರು ಜನಿಸಿದ್ದು 1882, ಜುಲೈ 1. ತೀರಿಕೊಂಡಿದ್ದು, 1962 ಜುಲೈ 1. ಅವರು ಜನಿಸಿದ ದಿನ ಮತ್ತು ತೀರಿಕೊಂಡ ದಿನ ಒಂದೇ ಆಗಿದೆ.

ಒಬ್ಬ ಮಾದರಿ ವೈದ್ಯರಾಗಿ ತಮ್ಮ ಬದುಕು ಸವೆಸಿದ ಅವರ ನೆನಪಿನಲ್ಲೇ ರಾಷ್ಟ್ರೀಯ ವೈದ್ಯರ ದಿನ ಆಚರಿಸಬೇಕು ಎಂದು ನಿರ್ಧರಿಸಿದ ಭಾರತ ಸರ್ಕಾರ 1991 ರಲ್ಲಿ ಜುಲೈ 1 ನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲು ಕರೆಕೊಟ್ಟಿತು.

ರಾಯ್ ಅವರು ಅಪ್ರತಿಮ ವೈದ್ಯರಾಗಿದ್ದರು. ತಮ್ಮ ದೂರದೃಷ್ಟಿ ನಿಲುವುಗಳಿಂದ ವೈದ್ಯಲೋಕಕ್ಕೆ ಅಪರೂಪದ ಕೊಡುಗೆ ಕೊಟ್ಟವರು. ಮೇಲು-ಕೀಳು ನೋಡದೆ, ಭೇದ-ಭಾವ ಮಾಡದೆ ಎಲ್ಲರನ್ನೂ ಒಂದೇ ರೀತಿ ನೋಡಿದ ಜನಮೆಚ್ಚಿದ ವೈದ್ಯರಾಗಿದ್ದ ರಾಯ್, ಹೊಸತನದ ಆಲೋಚನೆಗಳನ್ನು ಹೊಂದಿದ್ದರು.

1905 ರಲ್ಲಿ ಅವರು ಕೋಲ್ಕತಾ ವಿವಿಯಲ್ಲಿ ಓದುತ್ತಿರುವಾಗ ಬಂಗಾಳ ವಿಭಜನೆಯಾಯಿತು. ಸ್ವಾತಂತ್ರ್ಯ ಹೋರಾಟದಲ್ಲೂ ಭಾಗಿಯಾಗಿದ್ದ ರಾಯ್ ಅವರು ಕೆಲ ಕಾಲ ಮಹಾತ್ಮ ಗಾಂಧೀಜಿಯ ವೈದ್ಯರೂ ಆಗಿದ್ದರು ಎನ್ನುವುದು ವಿಶೇಷ. ಅವರು ವೈದ್ಯರಾಗಿದ್ದೂ ಅಲ್ಲದೆ ಆಡಳಿತದಲ್ಲೂ ಮುಂದೆ ನಿಂತು ಕೆಲಸ ಮಾಡಿದ್ದು, ಅಚ್ಚರಿ ತರುವಂತಹದ್ದು.

ಅನೇಕ ದೊಡ್ಡ ಆಸ್ಪತ್ರೆಗಳು ಅವರ ಕಾಲದಲ್ಲಿ ಸ್ಥಾಪನೆಯಾಗಿದೆ. ಸುಮಾರು 14 ವರ್ಷಗಳ ಕಾಲ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಅವರು ಆ ಸಮಯದಲ್ಲೂ ರೋಗಿಗಳ ಶುಶ್ರೂಷೆ ಮಾಡುತ್ತಿದ್ದರು. ಆ ಕಾರಣಕ್ಕೆ ಜನರ ಒಲವು ಗಳಿಸಿದ್ದರು. ಇಂತಹ ಮಹತ್ವದ ವೈದ್ಯರ ನೆನಪಿನಲ್ಲಿ ಭಾರತದಲ್ಲಿ ಜು.1 ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ವ ವೈದ್ಯರಿಗೆ ವೈದ್ಯರ ದಿನದ ಹಾರ್ದಿಕ ಶುಭಾಶಯಗಳು.

ಹೇಮಂತ ಚಿನ್ನು
ಕರ್ನಾಟಕ ಶಿಕ್ಷಕರ ಬಳಗ

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group