ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

Must Read

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ. ಸರಸ್ವತಿ ದೇಸಾಯಿ, ದಿ. ಬಿ.ಬಿ. ಮೇಳೆದ, ದಿ. ಶಂಕರ ಪಾನಶೆಟ್ಟಿ, ದಿ. ಮಲ್ಲಪ್ಪ ಚೌಗುಲೆ ಇವರ ಹೆಸರಿನಲ್ಲಿ ಇಡಲಾಗಿರುವ ದತ್ತಿ ನಿಧಿಯ ಪ್ರಯುಕ್ತ ‘ದತ್ತಿ ಕಾರ್ಯಕ್ರಮ’ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ ಸೊನೋಳ್ಳಿ ವಹಿಸಲಿದ್ದು, ಸಾಹಿತಿ ಆಶಾ ಕಡಪಟ್ಟಿ, ಹಮೀದಾ ಬೇಗಂ ದೇಸಾಯಿ,ಇಂದಿರಾ ಮೋಟೆಬೆನ್ನೂರ ಅತಿಥಿಗಳಾಗಿ ಭಾಗವಹಿಸುವರು.

ಕಾರ್ಯಕ್ರಮದಲ್ಲಿ ವಿವಿಧ ದತ್ತಿನಿಧಿಯ ಪೋಷಕರು ಮತ್ತು ಪಾಲಕರು ಭಾಗವಹಿಸುವರು. ‘ಸ್ವರಚಿತ ಕವನ ವಾಚನ ಕಾರ್ಯಕ್ರಮ’ ಸೇರಿದಂತೆ ‘ದತ್ತಿನಿಧಿ ಹಿರಿಯರ ಸ್ಮರಣೆ ‘ಮತ್ತು ಇನ್ನಿತರ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.

ಸಾಹಿತ್ಯಾಸಕ್ತರು ಸೇರಿದಂತೆ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಸಂಘದ ಕಾರ್ಯದರ್ಶಿ ರಾಜನಂದಾ ಘಾರ್ಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group