ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

Must Read

ಇದೇ ಶುಕ್ರವಾರ ದಿ.29 ರಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಸರಳಾ ಹೆರೇಕರ, ಸುನಂದಾ ಮುಳೆ, ಜಯಶ್ರೀ ನಿರಾಕಾರಿ ಮತ್ತು ಸುಮಿತ್ರಾ ಮಲ್ಲಾಪುರ ಅವರು ಲೇಖಕಿಯರ ಸಂಘ ದಲ್ಲಿ ತಮ್ಮ ಸಂಬಂಧಿಕರ ಹೆಸರಿನಲ್ಲಿ ಇಟ್ಟಿರುವ ದತ್ತಿ ನಿಧಿಯ ನೆನಪಿನಲ್ಲಿ ”ದತ್ತಿ ಉಪನ್ಯಾಸ ಕಾರ್ಯಕ್ರಮಗಳು ಮತ್ತು ಕವನ ವಾಚನ ಸ್ಪರ್ಧೆಗಳು” ಜರುಗಲಿವೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ ಸೋನೋಳ್ಳಿ ವಹಿಸುವರು.

ಉಪನ್ಯಾಸಕರಾಗಿ ಮರಾಠಾ ಮಂಡಳ ಕಾಲೇಜಿನ ಪ್ರಾಧ್ಯಾಪಕಿ ಪ್ರೊ. ವಿಜಯಲಕ್ಷ್ಮಿ ಪುಟ್ಟಿ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಆಶಾ ಕಡಪಟ್ಟಿ ಸೇರಿದಂತೆ ಹಿರಿಯ ಸಾಹಿತಿಗಳು ಮತ್ತು ಜಿಲ್ಲೆಯ ಲೇಖಕಿಯರು ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು ಮತ್ತು ಕನ್ನಡಾಭಿಮಾನಿಗಳು ಭಾಗವಹಿಸಬೇಕಾಗಿ ಲೇಖಕಿಯರ ಸಂಘದ ಕಾರ್ಯದರ್ಶಿ ರಾಜನಂದಾ ಘಾರ್ಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Latest News

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು – ರಾಮಚಂದ್ರ ಕಾಕಡೆ

ಮೂಡಲಗಿ- ವಿದ್ಯಾರ್ಥಿಗಳು ಎಲ್ಲಾ ರಂಗಗಳಲ್ಲಿ ಸಾಧನೆ ಮಾಡುವುದರೊಂದಿಗೆ ಗುಣ ಮಟ್ಟದ ಶಿಕ್ಷಣ ಪಡೆದು ಮಾನವೀಯ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗುಣಮಟ್ಟದ ಸ್ಥಾನ ಪಡೆಯಲು...

More Articles Like This

error: Content is protected !!
Join WhatsApp Group