spot_img
spot_img

ಡಾ. ಕವಿತಾಕುಸುಗಲ್ ಅವರಿಗೆ ಅಭಿನಂದನೆ

Must Read

spot_img

ಬೆಳಗಾವಿ: ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕರುಗಳು ವಿವಿಧ ಉನ್ನತ ಹುದ್ದೆಗಳನ್ನು ಪ್ರತಿನಿಧಿಸುತ್ತಿರುವುದು ಸಂತೋಷದ ಸಂಗತಿ. ಉನ್ನತ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದ ರಾಯಭಾರಿಗಳಾಗಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರುಗಳು ಗುರುತಿಸಿಕೊಳ್ಳುತ್ತಿರುವುದು ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ಗರಿ ಮೂಡಿದಂತಾಗಿದೆ ಎಂದು ಪ್ರೊ.ಎಸ್. ಎಂ. ಗಂಗಾಧರಯ್ಯ ಅಭಿಪ್ರಾಯಪಟ್ಟರು.

ಅವರು ಡಾ.ಕವಿತಾ ಕುಸುಗಲ್ ಅವರನ್ನು ಸನ್ಮಾನಿಸಿ ಮಾತನಾಡಿದರು.

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ಅಧ್ಯಕ್ಷರನ್ನಾಗಿ ಹಾಗೂ ಡಾ.ಪ್ರಕಾಶ ಕಟ್ಟಿಮನಿ ಅವರನ್ನು ನಾ.ರಾಜಪುರೋಹಿತ ಗಳಗನಾಥ ಪ್ರತಿಷ್ಠಾನದ ಸದಸ್ಯರನ್ನಾಗಿ ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭವನ್ನು ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯಲ್ಲಿ ಏರ್ಪಡಿಸಲಾಗಿತ್ತು.ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಎಂ. ಹನುಮಂತಪ್ಪ, ಪರೀಕ್ಷಾಂಗ ಕುಲಸಚಿವರಾದ ಪ್ರೊ. ಶಿವಾನಂದ ಗೊರನಾಳೆ ಅವರುಗಳು ಡಾ.ಕವಿತಾ ಕುಸುಗಲ್‌ ಅವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗಣಕ ವಿಭಾಗದ ಮುಖ್ಯಸ್ಥರಾದ ಪ್ರೊ.ದಯಾನಂದ ಸಾವುಕಾರ ಉಪಸ್ಥಿತರಿದ್ದರು. ಡಾ. ಗಜಾನನ ನಾಯ್ಕ ಸ್ವಾಗತಿಸಿದರು, ಡಾ.ಪಿ.ನಾಗರಾಜ ವಂದಿಸಿದರು. ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!