ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ಡಾ.ನಾಗೇಂದ್ರ ಚಲವಾದಿ ಆಯ್ಕೆ

Must Read

ಸವದತ್ತಿ – ತಾಲೂಕಿನ ಮುನವಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಶಿಕ್ಷಕ ಡಾ.ನಾಗೇಂದ್ರ ಚಲವಾದಿಯವರನ್ನು ಇದೇ ಅಕ್ಟೋಬರ್ ೩೦ ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಜರುಗಲಿರುವ ಅಕ್ಷರ ತಾಯಿ ಲೂಸಿ ಸಾಲ್ಡಾನಾ ಸೇವಾ ಸಂಸ್ಥೆ ನೀಡಲಿರುವ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಭೀಮಪ್ಪ ಕಾಸಾಯಿ ತಿಳಿಸಿದ್ದಾರೆ.

ಎಲೆ ಮರೆಯ ಕಾಯಿಯಂತೆ ಯಾವುದೇ ಫಲಾಪೇಕ್ಷೆ ಇಲ್ಲದೇ ತಮ್ಮ ಪಾಡಿಗೆ ತಾವು ಅಮೂಲ್ಯವಾದ ಸೇವೆ ಸಲ್ಲಿಸುತ್ತ ಜೊತೆಗೆ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ.ಕೃಷ್ಣ ನಾಯಕ ಮಾರ್ಗದರ್ಶನದಲ್ಲಿ ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠ ಧಾರವಾಡದಲ್ಲಿ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ಕಾವ್ಯಗಳು ವಿಷಯದಲ್ಲಿ ಸಂಶೋಧನೆ ಕೈಗೊಳ್ಳುವ ಮೂಲಕ ೨೦೧೯ ರಲ್ಲಿ ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿರುವ ನಾಗೇಂದ್ರ ಚಲವಾದಿಯವರು ಮಿತಭಾಷಿಗಳು. ಶಿಕ್ಷಕರಷ್ಟೇ ಅಲ್ಲದೇ ಸಾಹಿತ್ಯ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿರುವ ಚಲವಾದಿಯವರು ವೀರಮಾತೆ ಶಿವಶರಣೆ ಗಂಗಾಂಬಿಕೆ ಮತ್ತು ಅನುಸಂಧಾನ ಕೃತಿಗಳನ್ನು ಪ್ರಕಟಿಸಿರುವರು.ಇವರ ಈ ಆಯ್ಕೆಯನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸವದತ್ತಿ ತಾಲೂಕು ಘಟಕದ ಅಧ್ಯಕ್ಷರಾದ ಎಚ್.ಆರ್.ಪೆಟ್ಲೂರ ಕಾರ್ಯದರ್ಶಿ ಎಫ್.ಜಿ.ನವಲಗುಂದ. ಎಂ.ಎಸ್.ಹೊಂಗಲ.ಮುಖ್ಯೋಪಾಧ್ಯಾಯರಾದ ಪ್ರಕಾಶ ಶೀಲವಂತ.ಬಿ.ಐ.ಇ.ಆರ್.ಟಿ ವೈ.ಬಿ.ಕಡಕೋಳ ಮೊದಲಾದವರು ಅಭಿನಂದಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group