ಸಿಂದಗಿ– ಆರೋಗ್ಯ ಸದೃಢವಾಗಿರಲು ಕುಡಿಯುವ ನೀರು ಮೊದಲು ಶುದ್ದವಾಗಿರಬೇಕು. ಮಕ್ಕಳ ಕಲಿಕೆಗೆ ಹೆಚ್ಚು ಪ್ರಾಮುಖ್ಯತೆ ಕೊಟ್ಟಷ್ಟು ಅವರ ಆರೋಗ್ಯದ ಕಡೆಗೂ ಹೆಚ್ಚು ಗಮನ ಹರಿಸುವುದು ಶಿಕ್ಷಣ ಸಂಸ್ಥೆಯ ಮೇಲಿದೆ ಎಂದು ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು.
ಅವರು ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಕುಡಿಯಲು ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಪ್ರಸ್ತುತ ಮುಖ್ಯ ವಿಚಾರವಾಗಿದೆ. ಈ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ಪ್ರಯೋಜನಕಾರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರಾದ ಶಿವಪ್ಪಗೌಡ ಬಿರಾದಾರ, ಬಸನಗೌಡ ಪಾಟೀಲ ಡಂಬಳ, ಶಿರುಗೌಡ ದೇವರಮನಿ, ಬಿ.ಜಿ.ನೇಲ್ಲಗಿ, ವಿಜುಗೌಡ ಕನ್ನೋಳ್ಳಿ ಸೇರಿದಂತೆ ಪ್ರಾಚಾರ್ಯರಾದ ಡಾ. ಎ.ಬಿ.ಸಿಂದಗಿ, ಎ.ಆರ್.ಹೆಗ್ಗಣದೊಡ್ಡಿ. ಎಸ್.ಎಸ್.ಪಾಟೀಲ ಹಾಘೂ ಸಂಸ್ಥೆಯ ವಿವಿಧ ಅಂಗ ಸಂಸ್ಥೆಗಳ ಉಪನ್ಯಾಸಕರು ಭಾಗವಹಿಸಿದ್ದರು.