ಮೂಡಲಗಿ: ತಾಲೂಕಿನ 20 ಗ್ರಾಮಗಳ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕುರಿತು ಪ್ರಚಾರ ಮಾಡುವ ಉದ್ದೇಶದಿಂದ ರೋಜಗಾರ ವಾಹಿನಿಗೆ ಚಾಲನೆ ನೀಡಲಾಗಿದ್ದು, ಈ ವಾಹಿನಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಬಗ್ಗೆ ಪ್ರಚಾರ ಮಾಡಲಿದೆ ಎಂದು ತಾಪಂ ಸಿಇಓ ಎಫ್ ಜಿ ಚಿನ್ನನ್ನವರ ಹೇಳಿದರು.
ಅವರು ಪಟ್ಟಣದ ತಾಪಂ ಕಾರ್ಯಾಲಯದ ಎದುರು ನರೇಗಾ ಯೋಜನೆಯ ಐಇಸಿ ಚಟುವಟಿಕೆಯಡಿ ರೋಜಗಾರ ವಾಹಿನಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ತಾಪಂ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನ್ನವರ ಮಾತನಾಡಿ, ನರೇಗಾ ಯೋಜನೆಯ ಬಗ್ಗೆ ಗ್ರಾಮೀಣ ಜನರಿಗೆ ಮಾಹಿತಿ ನೀಡಲು ವಾಹಿನಿ ಮೂಲಕ ಪ್ರಚಾರ ಮಾಡಲಾಗುತ್ತಿದ್ದು, ಇದರು ಪ್ರಯೋಜನವನ್ನು ಗ್ರಾಮೀಣ ಜನರು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಕಛೇರಿ ವ್ಯವಸ್ಥಾಪಕರ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.