ನದಿ ಸ್ವಚ್ಛತೆಗೆ ಚಾಲನೆ ನೀಡಿದ ಈರಣ್ಣ ಕಡಾಡಿ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾಧಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ ಮೂಲಕ ಶುದ್ದ ನೀರಿಗಾಗಿ ಪ್ರಯತ್ನಿಸಬೇಕು ಜೊತೆಗೆ ಸಸಿ ನೆಡುವ ಮೂಲಕ ಉತ್ತಮ ಆಮ್ಲಜನಕ ದೊರೆಯುವಂತೆ ವಿಶೇಷ ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.

ಸೋಮವಾರ ಸೆ. 27 ರಂದು ಅರಭಾವಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನದಡಿ ಲೋಳಸೂರ ಸೇತುವೆ ಹತ್ತಿರ ಘಟಪ್ರಭಾ ನದಿಯ ದಂಡೆ ಮತ್ತು ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಈರಣ್ಣ ಕಡಾಡಿ ಅವರು ಸೆಪ್ಟೆಂಬರ 17 ರಿಂದ ಅಕ್ಟೋಂಬರ 7 ರವರೆಗೆ 20 ದಿನಗಳ ಕಾಲ ಸೇವೆ ಮತ್ತು ಸಮರ್ಪಣೆ ಅಭಿಯಾನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ ಎಂದರು.

- Advertisement -

ಭಗವಂತ ಎಲ್ಲವನ್ನು ಕೊಟ್ಟಿದ್ದರೂ, ಮಾನವರು ನಮ್ಮ ನಮ್ಮ ವೈಯಕ್ತಿಕ ಸ್ವಾರ್ಥಕ್ಕಾಗಿ ನಾವೆಲ್ಲ ಪ್ರಕೃತಿಯನ್ನು ನಾಶ ಪಡಿಸಿದ್ದೇವೆ. ಆ ಕಾರಣದಿಂದ ಉಚಿತವಾಗಿ ಸಿಗುವಂತಹ ನೀರನ್ನು ಇವತ್ತು ಬಾಟಲ್‍ಗಳ ಮುಖಾಂತರ ಹಣದಿಂದ ಖರೀದಿಸುವ ಪರಿಸ್ಥಿತಿಗೆ ಬಂದಿದ್ದೇವೆ. ಸಾಕಷ್ಟು ಗಿಡ ಮರಗಳಿದ್ದರು ಅವುಗಳನ್ನು ನಾಶ ಮಾಡಿ ಆಮ್ಲಜನಕದ ಕೊರತೆಗೆ ಕಾರಣರಾಗಿದ್ದೇವೆ. ಅದನ್ನೆಲ್ಲ ಸರಿಪಡಿಸುವ ನಿಟ್ಟಿನಲ್ಲಿ ನಮ್ಮದೆಲ್ಲ ಅಳಿಲು ಸೇವೆ ಈ ರೀತಿ ಕಾರ್ಯಕ್ರಮ ಮಾಡುವ ಮೂಲಕ ನಮ್ಮ ಅಳಿಲು ಸೇವೆ ಸಲ್ಲಿಸಬೇಕೆಂದು ಈರಣ್ಣ ಕಡಾಡಿ ವಿನಂತಿ ಮಾಡಿದರು.

ರಾಜ್ಯ ಬಿಜೆಪಿ ರೈತ ಮೋರ್ಚಾ ಇಡಿ ರಾಜ್ಯಾದ್ಯಂತ 71 ಸ್ಥಳಗಳಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ನದಿ ಸ್ವಚ್ಛತೆ ಮಾಡುವ ಕಾರ್ಯಕ್ರಮ ಮತ್ತು ಸಸಿ ನೆಡುವ ಕಾರ್ಯಕ್ರಮ ಮಾಡುವ ಮೂಲಕ ನಾವು ಜನರಲ್ಲಿ ಜಾಗೃತಿಯನ್ನು ಉಂಟು ಮಾಡುತ್ತಿದ್ದೇವೆ. ಎಲ್ಲರೂ ಇದಕ್ಕೆ ಕೈ ಜೋಡಿಸಿದರೆ ಈ ಕಾರ್ಯಕ್ರಮ ಹೆಚ್ಚು ಯಶಸ್ವಿಯಾಗುತ್ತದೆ ಅದಕ್ಕೆ ಜನರು ಭಾಗವಹಿಸುವ ಮೂಲಕ ಕೈ ಜೋಡಿಸಬೇಕೆಂದು ಕರೆ ನೀಡಿದರು.

ಬೆಳಗಾವಿ ಗ್ರಾಮೀಣ ಬಿಜೆಪಿ ರೈತ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಅರಭಾವಿ ಮಂಡಳ ಅಧ್ಯಕ್ಷ ಮಹಾದೇವ ಶೆಕ್ಕಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಕೌಜಲಗಿ, ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ, ಎಸ್.ಸಿ ಮೋರ್ಚಾ ಅಧ್ಯಕ್ಷ ನಾಗರಾಜ ಕುದರಿ, ಬಸವರಾಜ ಹುಳ್ಳೇರ, ತವನಪ್ಪ ಬೆನ್ನಾಡಿ, ಲಕ್ಕಪ್ಪ ತಹಶೀಲ್ದಾರ, ಚಿದಾನಂದ ದೆಮಶೆಟ್ಟಿ, ಸಂತೋಷ ಹುಂಡೇಕರ, ರವಿ ಪತ್ರಾವಳಿ, ಕೇದಾರಿ ಭಸ್ಮೆ, ಭೀಮಶಿ ಬಂಗಾರಿ, ಬಸವರಾಜ ಗಾಡವಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!