ಮೂಡಲಗಿ: ತಾಲೂಕಿನ ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರಕಾರಗಳಿಗೆ ಅಧಿಕಾರವಿದೆ ಎಂಬ ಐತಿಹಾಸಿಕ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯ ಗುರುವಾರ ನೀಡಿದೆ.
ಆದ್ದರಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೆ ತರುವಂತೆ ಆಗ್ರಹಿಸಿ ಮೂಡಲಗಿ ತಾಲೂಕ ತಹಶೀಲ್ದಾರ ಕಛೇರಿಯ ಶಿರೇಸ್ತೆದಾರ ಪರಶರಾಮ ನಾಯಿಕ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಶನಿವಾರದಂದು ಮನವಿ ಸಲ್ಲಿಸಿದರು.
ಕಳೆದ ೩ ದಶಕಗಳಿಂದ ದೇಶದಲ್ಲಿ ಪರಿಶಿಷ್ಟ ಜಾತಿಯಲ್ಲಿ ಬರುವ ಹಿಂದುಳಿದ ಜಾತಿಗಳು ಒಳ ಮೀಸಲಾತಿಗಾಗಿ ಹೋರಾಟ ಮಾಡಿದ್ದು ಅದರಂತೆ ರಾಜ್ಯಾದ್ಯಂತ ಒಳಮೀಸಲಾತಿಗಾಗಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಬೀದಿಗಿಳಿದು ಹೋರಾಟ ಮಾಡಿದ್ದು ಈಗ ಅದರ ಪ್ರತಿಫಲವಾಗಿ ಸುಪ್ರೀಂ ಕೋರ್ಟ ತೀರ್ಪನ್ನು ನಾವು ಸ್ವಾಗತ ಮಾಡುತ್ತೇವೆ. ಮುಖ್ಯ ಮಂತ್ರಿಗಳು ಕೂಡಲೇ ವಿಶೇಷ ಅಧಿವೇಶನವನ್ನು ಕರೆದು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಜಾರಿಗೆ ತರಬೇಕು. ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿಯ ಎಲ್ಲ ಹಿಂದುಳಿದ ಜಾತಿಗಳು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಸಭಲರಾಗಲು ಒಳ ಮೀಸಲಾತಿಯು ಅತೀ ಅವಶ್ಯವಿದ್ದು ಅದಷ್ಟು ಬೇಗನೇ ಒಳ ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಮೇಶ್ ಸಣ್ಣಕ್ಕಿ, ಮರೆಪ್ಪ ಮರೆಪ್ಪಗೋಳ, ಅಶೋಕ ಶಿದ್ದೀಲಿಂಗಪ್ಪಗೋಳ, ಯಶವಂತ ಮಂಟುರ, ಸುರೇಶ ಸಣ್ಣಕ್ಕಿ, ವಿಲ್ಸನ ಡವಳೇಶ್ವರ, ಪ್ರಕಾಶ ಮಾದರ, ಕೆಂಪಣ್ಣ ಮೇತ್ರಿ, ಯಮನ್ನಪ್ಪ ಮಾದರ, ಅನಿಲ ಗಸ್ತಿ, ಸುಂದರ ಬಾಲಪ್ಪಗೋಳ, ಬಂಡು ಸದಲಗಾ ಮತ್ತಿತರರು ಇದ್ದರು.