ಬೀದರ – ಬೀದರ್ ಜಿಲ್ಲೆಯ ಹುಮಾನಾಬಾದ ಮತ್ತು ಭಾಲ್ಕಿ ತಾಲ್ಲೂಕಿನ ಹಲವು ಗ್ರಾಮದಲ್ಲಿ ಭೂಕಂಪ ಸಂಭವಿಸಿದ್ದು ಆತಂಕ ಮೂಡಿಸಿದೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಬೆಳಿಗ್ಗೆ 9-11 ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆಯ ಭೂಕಂಪ ದಾಖಲಾಗಿದೆ.
ಅತ್ಯಂತ ಕಡಿಮೆ ಪ್ರಮಾಣದ ಭೂಕಂಪ ಇದಾಗಿದ್ದು ಯಾರೂ ಭಯಗೊಳ್ಳದಂತೆ ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿದೆ.
ವರದಿ: ನಂದಕುಮಾರ ಕರಂಜೆ, ಬೀದರ