spot_img
spot_img

ಶಿಕ್ಷಣ ಅದಾಲತ್ ಕಾರ್ಯಕ್ರಮ

Must Read

spot_img
- Advertisement -

ಸವದತ್ತಿ:  ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ದಿ. 04 -11- 2023 ರಂದು ಶಾಲಾ ಶಿಕ್ಷಣ  ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಅದಾಲತ್ ನಲ್ಲಿ  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಮೋಹನ ದಂಡಿನರವರ ನೇತೃತ್ವದಲ್ಲಿ ಸವದತ್ತಿ ತಾಲೂಕಿನ ಶಿಕ್ಷಕರ 22 ಅರ್ಜಿಗಳನ್ನು ಇತ್ಯರ್ಥಪಡಿಸಿ ಸೂಕ್ತ ಕ್ರಮ ವಹಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾತನಾಡಿ, ಇಲಾಖೆ ಆಶಯದಂತೆ ಶಿಕ್ಷಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಬಿ.ಎನ್.ಬ್ಯಾಳಿ  ಸವದತ್ತಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ ಕುರಿ , ಜಿಲ್ಲಾ ಉಪಾಧ್ಯಕ್ಷ ರಾದ ಎಮ್. ಎಫ್. ಸಿದ್ದನಗೌಡರ ಸವದತ್ತಿ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಅಧ್ಯಕ್ಷರಾದ  ಸುಧೀರ್  ಎಸ್.ವಾಗೇರಿ . ಪತ್ರಾಂಕಿತ ವ್ಯವಸ್ಥಾಪಕರಾದ ಐ. ಎಂ. ಮಕಾನದಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

- Advertisement -

ಕಾರ್ಯಕ್ರಮದ ಪ್ರಾರಂಭದಲ್ಲಿ ಶಿಕ್ಷಣ ಸಂಯೋಜಕರಾದ ಜಿ.ಎಂ.ಕರಾಳೆ ಸ್ವಾಗತಿಸಿದರು. ಎಂ ಡಿ ಹುದ್ಧಾರ ನಿರೂಪಿಸಿದರು ಕೊನೆಗೆ ಬಿ ಎಂ ಮಾಳಗಿ ವಂದಿಸಿದರು

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group