ಮೂಡಲಗಿ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ (ರಿ) ಮೈಸೂರ ಇವರು ರಾಜ್ಯ ಮಟ್ಟದ ಉತ್ತಮ ಸಮೂಹ ಸಂಪನ್ಮೂಲ ವ್ಯಕ್ತಿಗಳಿಗೆ ನೀಡುವ “ ಶಿಕ್ಷಣ ಸಾರಥಿ ಪ್ರಶಸ್ತಿ” ಗೆ ಮೂಡಲಗಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸಮೀರಹ್ಮದ ದಬಾಡಿ ಆಯ್ಕೆಯಾಗಿದ್ದಾರೆ.
ಜು. ೨೪ ರಂದು ತುಮಕೂರಲ್ಲಿ ಜರುಗುವ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.
ಶೈಕ್ಷಣಿಕ ಕಾರ್ಯಚಟುವಟಿಕೆಗಳು ಯಶಸ್ವಿಯಾಗಿ ಸಾಗುವ ನಿಟ್ಟಿನಲ್ಲಿ ಇಲಾಖೆಯ ಹಾಗೂ ಶಿಕ್ಷಕ ಸ್ನೇಹಿಯಾಗಿ ಕಾರ್ಯನಿರ್ವಹಿಸಿ, ಇಲಾಖೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಯಶಸ್ವಿಯಾದ ಪ್ರಯುಕ್ತ ಪ್ರಶಸ್ತಿಗೆ ಭಾಜನರಾಗಿದ್ದಾರೆ.