ಶಿಕ್ಷಣ ತಜ್ಞ ಈಶ್ವರ ಹೋಟಿ ಸನ್ಮಾನ

Must Read

ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ, ಶಿಕ್ಷಣ ತಜ್ಞ ಈಶ್ವರ ಹೋಟಿ ಅವರಿಗೆ ಧಾರವಾಡ ರಂಗಾಯಣ ನಿರ್ದೇಶಕರಾದ ಶ್ರೀ ರಮೇಶ ಎಸ್. ಪರವಿನಾಯ್ಕರ ಸನ್ಮಾನಿಸಿ ಅಭಿನಂದಿಸಿದರು.

ಇತ್ತೀಚೆಗೆ ಪ್ರತಿಷ್ಠಿತ ಜಿ. ನಾರಾಯಣಸ್ವಾಮಿ ಪ್ರಶಸ್ತಿ ಪಡೆದು ನಾಡಿನ ಕೀರ್ತಿ ಹೆಚ್ಚಿಸಿದ ಹೋಟಿಯವರ ಶ್ರದ್ಧೆ, ಪ್ರಾಮಾಣಿಕತೆ, ಕ್ರಿಯಾಶೀಲತೆಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ಒಲಿದು ಬಂದಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹೋಟಿಯವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಇನ್ನೂ ಉನ್ನತ ಹುದ್ದೆಗಳನ್ನು ಅಲಂಕರಿಸಲಿ ಎಂದು ಶುಭ ಹಾರೈಸಿದರು.

ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಬೈಲಹೊಂಗಲ ತಾಲ್ಲೂಕು ಅಧ್ಯಕ್ಷರಾದ ಎನ್. ಆರ್. ಠಕ್ಕಾಯಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ ಕೋಳಿ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group