ಸಿಂದಗಿ: ಯುವ ಸಂಸತ್ ಸ್ಪರ್ಧೆಯಲ್ಲಿ ತಾಲೂಕಿನ ಯಂಕಂಚಿ ಗ್ರಾಮದ ಸರಕಾರಿ (ಕೆಪಿಎಸ್) ಪ್ರೌಢಶಾಲೆಯ ವಿದ್ಯಾರ್ಥಿನಿ ಲಕ್ಷ್ಮೀ ಮಲ್ಲಿಕಾರ್ಜುನ ಮಡಿವಾಳಕರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.
ವಿಜಯಪುರ ದರಬಾರ್ ಪ್ರೌಢ ಶಾಲೆಯ ಆವರಣದಲ್ಲಿ ನಡೆದ ಯುವ ಸಂಸತ್ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ರಾಜ್ಯ ಮಟ್ಟಕ್ಕೆಯಾಗಿರುವ ವಿಷಯವನ್ನು
ಜಿಲ್ಲಾ ನೋಡಲ್ ಅಧಿಕಾರಿಗಳು ಹಾಗೂ ವಿಷಯ ಪರಿವೀಕ್ಷಕರಾದ ಶ್ರೀಮತಿ ಶೈಲಾ ಎಸ್ ಹಳೇಮನಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಕೋಲಾರ ಮೇಡಂ( ಡಿ ವ್ಯಾ ಪಿ ಸಿ)ಹಾಗೂ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಯಂಕಂಚಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆದರ್ಶ ಶಿಕ್ಷಕ ಅರ್ಜುನ ಮಲ್ಲೇವಾಡಿ ಶಿಕ್ಷಕರು ಭಾಗವಹಿಸಿದ್ದರು. ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ
ವಿದ್ಯಾರ್ಥಿನಿ ಕುಮಾರಿ ಲಕ್ಷ್ಮೀ ಮಲ್ಲಿಕಾರ್ಜುನ ಮಡಿವಾಳಕರ ಅವರಿಗೆ ಯಂಕಂಚಿ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಚಾರ್ಯರಾದ ವಿ ಎಸ್ ಪಾಟೀಲ, ಮಾರ್ಗದರ್ಶಿ ಶಿಕ್ಷಕರಾದ ಅರ್ಜುನ ಮಲ್ಲೇವಾಡಿ, ಗೊಲ್ಲಾಳಪ್ಪ ಅಗಸರ ಹಾಗೂ ಯಲ್ಲಪ ಹಾಗೂ ಪ್ರೌಢ ಶಾಲಾ ಹಿರಿಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಅಭಿನಂದನೆ ಸಲ್ಲಿದ್ದಾರೆ.