ಬೀದರ: ಚಲಿಸುತ್ತಿರುವಾಗಲೇ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಬೀದರನ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ.
ವಾಹನ ಸವಾರರು ಅಪಾಯದಿಂದ ಪಾರಾಗಿದ್ದಾರೆ. ನಗರದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಹೊರಟಿದ್ದ ಬ್ಯಾಟರಿ ಚಾಲಿತ ಇಲೆಕ್ಟ್ರಿಕಲ್ ಬೈಕ್ ಗೆ ಅಕಸ್ಮಾತ್ತಾಗಿ ಬೆಂಕಿ ಹೊತ್ತಿಕೊಂಡು ನೋಡ ನೋಡುತ್ತಲೇ ಉರಿದು ಹೋಯಿತು. ಈ ಘಟನೆಯಿಂದಾಗಿ ಈ ದ್ವಿಚಕ್ರ ವಾಹನ ತಯಾರಿಕಾ ಕಂಪನಿಯ ಗುಣಮಟ್ಟದ ಬಗ್ಗೆ ಸಂದೇಹ ಪಡುವಂತಾಗಿದೆ.
ವರದಿ: ನಂದಕುಮಾರ ಕರಂಜೆ, ಬೀದರ