ವಿದ್ಯುತ್ ಚಾಲಿತ ರೈಲು ಸಂಚಾರ ಪ್ರಾರಂಭ- ಸಂಸದ ಈರಣ್ಣ ಕಡಾಡಿ

Must Read

ಬೆಳಗಾವಿ: ಮೊಟ್ಟ ಮೊದಲ ವಿದ್ಯುತ್ ಚಾಲಿತ ರೈಲು ಸಂಚಾರ ಬುಧವಾರ ಬೆಂಗಳೂರಿನಿಂದ ಬೆಳಗಾವಿಗೆ ಆರಂಭವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಮಂಗಳವಾರ ನ-28 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಬೆಳಗಾವಿ-ಹುಬ್ಬಳ್ಳಿ ನಡುವೆ ರೈಲ್ವೆ ಮಾರ್ಗದ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ದಿನಾಂಕ 29.11.2023 ರಂದು ರೈಲು ಸಂಖ್ಯೆ:20653  ಬೆಂಗಳೂರು-ಬೆಳಗಾವಿ ಸೂಪರ್ ಫಾಸ್ಟ್ ಏಕ್ಸ್ ಪ್ರೆಸ್ ರೈಲು ಡೀಸೆಲ್ ಎಂಜಿನ್ ಬದಲು ಎಲೆಕ್ಟ್ರಿಕ್ ಎಂಜಿನ್ ಮೂಲಕ ಸಂಚಾರ ನಡೆಸಲಿದೆ ಎಂದರು.

ದಿನಾಂಕ 30.11.2023 ರಂದು ರೈಲು ಸಂಖ್ಯೆ:20654 ಬೆಳಗಾವಿ ರೈಲು ನಿಲ್ದಾಣದಿಂದ ಮೊಟ್ಟ ಮೊದಲ ವಿದ್ಯುತ್‌ಚಾಲಿತ ರೈಲು ಪ್ರತಿದಿನ ಸಂಚಾರ ನಡೆಸಲಿದೆ. ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಬರುವಂತಹ ದಿನಗಳಲ್ಲಿ ಪ್ರಯಾಣಿಕರಿಗೆ ಕಡಿಮೆ ಸಮಯದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ತಲುಪಲು ಹಾಗೂ ಬೆಂಗಳೂರಿನಿಂದ ಬೆಳಗಾವಿಗೆ ಬರಲು ಸಮಯ ಉಳಿತಾಯದ ಅನುಕೂಲವಾಗಿದೆ ಎಂದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group