- Advertisement -
ಮೂಡಲಗಿ – ಹೆಸ್ಕಾಂ ಇಲಾಖೆಯ ಆದೇಶದಂತೆ ಪ್ರತಿ ತಿಂಗಳ ಮೂರನೇ ಶನಿವಾರದಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಮೂಡಲಗಿಯ ಹೆಸ್ಕಾಂ ಉಪ ವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ದಿ. ೨೦ ರಂದು ಹಮ್ಮಿಕೊಳ್ಳಲಾಗಿದೆ.
ವಿದ್ಯುತ್ ಗ್ರಾಹಕರು ತಮ್ಮ ಕುಂದು ಕೊರತೆಗಳನ್ನು ಈ ಸಭೆಯಲ್ಲಿ ಹೇಳಿಕೊಳ್ಳಬಹುದಾಗಿದೆ.
ಶನಿವಾರ ದಿ. ೨೦ ರಂದು ಮುಂಜಾನೆ ೧೧ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದೆ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.