ವ್ಯಕ್ತಿ ಪೂಜೆಗಿಂತ, ಪಕ್ಷದ ತತ್ವ ಸಿದ್ದಾಂತಕ್ಕೆ ಮಹತ್ವ ನೀಡಿ- ಸಿ.ಟಿ.ರವಿ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮೂಡಲಗಿ: ಶಕ್ತಿಯುತ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ತೊಡಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವನ್ನು ಬಲಪಡಿಸುವ ಸಲುವಾಗಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಶುಕ್ರವಾರ (ಏ.9) ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ನಿವಾಸಕ್ಕೆ ಉಪಚುನಾವಣೆ ಹಿನ್ನಲೆಯಲ್ಲಿ ಭೇಟಿ ನೀಡಿ, ಸನ್ಮಾನ ಸ್ವೀಕರಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದುತ್ವ ಮತ್ತು ರಾಷ್ಟ್ರೀಯ ಸಿದ್ಧಾಂತಕ್ಕೆ ಪಕ್ಷ ಈಗಲೂ ಬದ್ಧವಾಗಿದ್ದು ವ್ಯಕ್ತಿ ಪೂಜೆಗಿಂತ ಪಕ್ಷದ ತತ್ವ ಸಿದ್ದಾಂತ ಪ್ರತಿಸಾಧನೆಗಳಿಗಾಗಿ ಕಾರ್ಯಕರ್ತರು ದುಡಿಯಬೇಕೆಂದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ದಿವಂಗತ ಸುರೇಶ ಅಂಗಡಿಯವರು ಸಾಕಷ್ಟು ಯೋಜನೆಗಳನ್ನು ಕೈಗೊಂಡಿದ್ದರು. ಅವುಗಳನ್ನು ಮುಂದುವರಿಸಿ ರಾಜ್ಯದ ಎರಡನೆಯ ರಾಜಧಾನಿ ಬೆಳಗಾವಿಯನ್ನು ದೇಶದ ಉನ್ನತ ನಗರಗಳಂತೆ ಬೆಳೆಸುವುದು ಪಕ್ಷದ ಮತ್ತು ಪ್ರಧಾನಿಯವರ ಆಶಯವಾಗಿದೆ ಎಂದರಲ್ಲದೇ ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ವಿನಂತಿಸಿದರು.

- Advertisement -

ಪಕ್ಷದ ಪ್ರಮುಖರಾದ ಬಸವರಾಜ ಕಡಾಡಿ, ಸುಭಾಸ ಪಾಟೀಲ, ಡಿಸಿಸಿ ಬ್ಯಾಂಕ ನಿರ್ದೇಶಕ ಸತೀಶ ಕಡಾಡಿ, ಶಿವಾನಂದ ಮುಗಳಿಹಾಳ, ಪರಪ್ಪ ಕಡಾಡಿ, ಬಸಗೊಂಡ ಪರಕನಟ್ಟಿ, ಕೃಷ್ಣಪ್ಪ ಮುಂಡಿಗನಾಳ, ಪ್ರಭು ಕಡಾಡಿ, ಬಸವರಾಜ ಜಗದಾಳೆ, ಮಹಾದೇವ ಮದಭಾಂವಿ, ಈರಣ್ಣ ಮುನ್ನೋಳಿಮಠ, ಅಡಿವೆಪ್ಪ ಕುರಬೇಟ, ರಾಮನಿಂಗ ಬಿ. ಪಾಟೀಲ, ಬಾಳಪ್ಪ ಮಟಗಾರ, ಬಸವರಾಜ ಖಾನಾಪೂರ, ತುಕಾರಾಮ ಪಾಲಕಿ, ಸಿದ್ದಪ್ಪ ಹೆಬ್ಬಾಳ, ಶಿವಾನಂದ ದಬಾಡಿ, ಪರಪ್ಪ ಗಿರೆಣ್ಣವರ ಸೇರಿದಂತೆ ಅನೇಕ ಪಕ್ಷ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!