spot_img
spot_img

ಗ್ಲೋಬಲ್ ಸ್ಮಾರ್ಟ್ ಕಿಡ್ಸ್  ಇಂದಿರಾ ಗಾಂಧಿ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ 

Must Read

spot_img
- Advertisement -

ಸಿಂದಗಿ; ನಮ್ಮ ಸುತ್ತಮುತ್ತಲಿನ ಪರಿಸರವನ್ನು  ಸಂರಕ್ಷಿಸುವುದು ನಮ್ಮ ಎಲ್ಲರ ಕರ್ತವ್ಯವಾಗಿದೆ. ಪರಿಸರ ಉಳಿದರೆ ಮಾತ್ರ ನಮಗೆ ಆರೋಗ್ಯಕರವಾದ ಜೀವನವನ್ನು ನಡೆಸಲು ಸಾಧ್ಯ ಎಂದು ಶಾಲೆಯ ಮುಖ್ಯ ಗುರುಮಾತೆ ರೇಖಾ ಕಟಕೆ ಹೇಳಿದರು.

ಪಟ್ಟಣದ ಗ್ಲೋಬಲ್ ಸ್ಮಾರ್ಟ್ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಇಂದಿರಾ ಗಾಂಧಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಟ್ಟು ಮಾತನಾಡಿ, ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿಯನ್ನು ವಹಿಸಬೇಕು ಹಾಗೂ ಭೂದೇವಿಯನ್ನು ರಕ್ಷಿಸುವ ಕಾಯಕದಲ್ಲಿ ಇಂದಿನಿಂದಲೇ ತೊಡಗಬೇಕು. ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ, ಅರಣ್ಯನಾಶ ಮತ್ತು ಜೀವವೈವಿಧ್ಯದ ನಷ್ಟದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಶಾಲೆಯ  ವಿದ್ಯಾರ್ಥಿಗಳಿಂದ  ಸಸಿಗಳು ನೆಡುವ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

- Advertisement -
- Advertisement -

Latest News

ಕವನ : ದ್ರೌಪದಿಯ ಸ್ವಗತ

ದ್ರೌಪದಿಯ ಸ್ವಗತ ನಾನು ಅರಸುಮನೆತನದ ಹೆಣ್ಣು, ಅರ್ಧಜಗದ ಮಣೆ ಹಿಡಿದ ಹೆಣ್ಣು. ಆದರೂ ನನ್ನ ಬದುಕು ಒಂದು ಕತ್ತಲು ಗವಿಯಂತೆ, ನೂರು ಚೂಪಿನ ಕತ್ತಿಗಳ ಮಧ್ಯೆ ಹೆಜ್ಜೆ ಹಾಕಿದಂತಿತ್ತು. ನಾನು ಕದನದ ಕಿಡಿಯಾದೆ ಅವಮಾನಗಳ ನೆರಳಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group