ಚಾಮರಾಜನಗರ – ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಂಜೀವಿನಿ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಕಾಶಭವನದಲ್ಲಿ ದಿ.೫ ರಂದು ಮಧ್ಯಾಹ್ನ 2:30ಕ್ಕೆ ಪರ್ಯಾವರಣ ದಿನಾಚರಣೆಯನ್ನು ಆಚರಿಸಲಾಗುವುದೆಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ರವರು ನೆರವೇರಿಸಲಿದ್ದಾರೆ. ಉದ್ದಾನೇಶ್ವರ ವಿರಕ್ತ ಮಠದ ಇಮ್ಮಡಿ ಉದ್ದಾನ ಸ್ವಾಮಿಗಳವರು ಆಶೀರ್ವಚನ ನೀಡಲಿದ್ದಾರೆ
ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀಯವರು ಅಧ್ಯಕ್ಷತೆ ವಹಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಮತಿ ಸಭ್ಯಶ್ರೀ ರವರು, ರಾಮಶೇಷ ಪಾಠ ಶಾಲೆಯ ಪ್ರಾಂಶುಪಾಲರಾದ ಆರ್ ಪ್ರದೀಪ್ ಕುಮಾರ್ ದೀಕ್ಷಿತ್ ರವರು ಹಾಗೂ ಮನೋಜ್ ರವರು ಭಾಗವಹಿಸಲಿದ್ದಾರೆ. ಪರಿಸರ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸೂಚಿಸಲಾಗಿದೆ