ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಪರಿಸರ ಜಾಗೃತಿ ಕಾರ್ಯಕ್ರಮ

Must Read

ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಡಲಗಿ ವಲಯದ ನಾಗನೂರ ಗ್ರಾಮದ ಭಗೀರಥ ಶಾಲೆಯ ಆವರಣದಲ್ಲಿ ಗಿಡ ನೆಟ್ಟು ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಜರುಗಿತು.

ಮುಖ್ಯ ಅತಿಥಿ ಭಗೀರಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪರಸಪ್ಪ ಎಲ್.ಬಬಲಿ ಮಾತನಾಡಿ, ಸರ್ಕಾರವು ಜನರಿಗೆ ಗ್ಯಾಸ್ ಸಿಲೆಂಡರ್ ನೀಡುವುದರ ಮುಖಾಂತರ ಪರಿಸರದ ಸಂರಕ್ಷಣೆಗೆ ಹೆಚ್ಚು ಆದ್ಯತೆ ನೀಡಿದೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೂಡ ಗ್ರಾಮಗಳಲ್ಲಿ ಸಾರ್ವಜನಿಕ ಸ್ಥಳ ಹಾಗೂ ಶಾಲೆಯ ಆವರಣದಲ್ಲಿ ಗಿಡ ನಾಟಿ ಮಾಡುವುದರ ಮುಖಾಂತರ ಜನರಿಗೆ ಪರಿಸರದ ಕುರಿತು ಜಾಗೃತಿ ಮೂಡಿಸಿ ಉತ್ತಮವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾದುದು ಎಂದರು.

ಯೋಜನೆಯ ಕೃಷಿ ಮೇಲ್ವಿಚಾರಕ ಈರಣ್ಣ ಅಂಗಡಿ ಪ್ರಾಸ್ತಾವಿಕ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕದ ಪ್ರತಿಯೊಂದು ಗ್ರಾಮದಲ್ಲಿ ಗಿಡ ನಾಟಿ ಮಾಡಿ ಪರಿಸರದ ಕುರಿತು ಜಾಗೃತಿ ಮೂಡಿಸುತ್ತಿದೆ ಉತ್ತಮವಾದ ಗಾಳಿ ಮತ್ತು ಮಳೆಯನ್ನು ಪಡೆಯಲು ಹೆಚ್ಚು ಗಿಡಮರಗಳನ್ನು ಬೆಳೆಸಬೇಕೆಂದು ತಿಳಿಸಿದರು.

ಮೂಡಲಗಿ ವಲಯದ ಮೇಲ್ವಿಚಾರಕರಾದ ಪರವಿನ ಮುಜಾವರ್ ಸ್ವಾಗತಿಸಿದರು, ಸೇವಾ ಪ್ರತಿನಿಧಿಯಾದ ಮದೀನಾ ನಾಯಕವಾಡಿ ವಂದಿಸಿದರು.

ಸಮಾರಂಭದಲ್ಲಿ ಭಗೀರಥ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಮಾಂತೇಶ್ ಕರಿಹೋಳಿ, ಶಿಕ್ಷಕರಾದ ಸುಭಾಸ್ ಖಾತೆನವರ್, ಪಾಂಡುರಂಗ ಕಾಳನವರ ಹಾಗೂ ಒಕ್ಕೂಟದ ಉಪಾಧ್ಯಕ್ಷೆ ಲಕ್ಷ್ಮಿ ಸಬರದ, ಸೇವಾ ಪ್ರತಿನಿಧಿ ಕವಿತಾ ದಿನ್ನಿಮನಿ, ಪ್ರಗತಿಬಂಧು ಮತ್ತು ಸ್ವಸಹಾಯ ತಂಡದ ಸದಸ್ಯರು ಉಪಸ್ಥಿತರಿದ್ದರು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group