spot_img
spot_img

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ಮಾನವನ ಕರ್ತವ್ಯ : ಡಾ. ಭೇರ್ಯ ರಾಮಕುಮಾರ್

Must Read

- Advertisement -

 

ಪರಿಸರ ಸಂರಕ್ಷಣೆ ಕೇವಲ  ಸರ್ಕಾರದ ಕರ್ತವ್ಯವಲ್ಲ. ಮುಂದಿನ ಪೀಳಿಗೆಗೆ ಸುಂದರ ಪರಿಸರ, ನೀರು, ಗಾಳಿ, ಬದುಕು ನೀಡುವ ಜವಾಬ್ದಾರಿ ನಮ್ಮದಾಗಿದೆ ಎಂದು ಕನ್ನಡ ಸಾಹಿತ್ಯ  ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ   ಡಾ. ಭೇರ್ಯ ರಾಮಕುಮಾರ್ ನುಡಿದರು.

ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಅಖಿಲ ಭಾರತೀಯ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತು ಹಾಗೂ ಮಕ್ಕಳ ಸಾಹಿತ್ಯ ಪರಿಷತ್ತು ಸಂಯುಕ್ತವಾಗಿ ಹಮ್ಮಿಕೊಂಡಿದ್ದ  ಪರಿಸರ ಸಂರಕ್ಷಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಪರಿಸರ ನಾಶದಿಂದಾಗಿ ಮಾನವ ಸಮಸ್ಯೆಗಳ ಸುಳಿಗೆ ಸಿಲುಕ್ಕಿದ್ದಾನೆ. ಹೃದಯಾಘಾತ, ಶ್ವಾಸಕೋಷದ  ಕ್ಯಾನ್ಸರ್ ಮೊದಲಾದ ಕಾಯಿಲೆಗಳು ಹೆಚ್ಚುತ್ತಿವೆ. ಅತಿವೃಷ್ಟಿ, ಅನಾವೃಷ್ಟಿ ಉಂಟಾಗುತ್ತಿದೆ. ಕಾಡಿನ ನಾಶದಿಂದಾ ಗಿ ಆನೆಗಳು, ಚಿರತೆಗಳು ಗ್ರಾಮಗಳಿಗೆ ನುಗ್ಗುತಿವೆ. ಜನರು  ಭಯದಿಂದ ಬಧುಕಬೇಕಾದ ಸ್ಥಿತಿ ಬಂದಿದೆ. ಇದ್ದಕ್ಕೆಲ್ಲ ಪರಿಸರ ವಿನಾಶವೇ ಕಾರಣ ಎಂದು ಆತಂಕ  ವ್ಯಕ್ತ ಪಡಿಸಿದರು.

- Advertisement -

ಪರಿಸರ ಸಂರಕ್ಷಣೆ ಸರ್ಕಾರದ ಹೊಣೆ ಎಂದು ಜನರು ಕಣ್ಮುಚ್ಚಿ ಕೂರಬಾರದು. ಪ್ರತಿಯೊಬ್ಬರೂ ತಮ್ಮ ಜನ್ಮದಿನದಂದು, ತಮ್ಮ ತಂದೆತಾಯಿಯ ಜನ್ಮದಿನದ ದಿನದಂದು, ವಿವಾಹ ವಾರ್ಷಿಕೋತ್ಸವ ದಿನದಂದು, ತಮ್ಮ ಹಿರಿಯರ ಸವಿನೆನಪಿನಲ್ಲಿ ಪ್ರತಿ ವರ್ಷವೂ ಸಸಿಗಳನ್ನು ನೆಟ್ಟು ಬೆಳೆಸಬೇಕು. ಆ ಮೂಲಕ ಮುಂದಿನ ಪೀಳಿಗೆಗೆ ಸುಂದರ ಪರಿಸರ ನೀಡಬೇಕು ಎಂದು ಅವರು ನುಡಿದರು. ನಂತರ ಮಕ್ಕಳಿಂದ ಪರಿಸರ ಸಂರಕ್ಷಣೆ ಕುರಿತಂತೆ ಸಾಮೂಹಿಕ ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಮಾಡಿಸಿದರು.

ನೇತ್ರ ತಜ್ಞರಾದ ಡಾ. ಸೌಮ್ಯ ಅವರು ಮಾತನಾಡಿ ಮಕ್ಕಳು ಮೊಬೈಲ್ ಬಳಸುವುದನ್ನು ಕಡಿಮೆ ಮಾಡಬೇಕು. ಮೊಬೈಲ್ ಗಳನ್ನು ಅತಿಯಾಗಿ ವೀಕ್ಷಿಸುವುದರಿಂದ  ಮಕ್ಕಳಿಗೆ ಕಣ್ಣಿನ ಸಮಸ್ಯೆಗಳು ಉಂಟಾಗುತ್ತವೆ. ಈ ಬಗ್ಗೆ ಪೋಷಕರು ಗಮನ ಹರಿಸಬೇಕೆಂದು ನುಡಿದರು.

ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ತಿನ  ಮೈಸೂರು ನರಸಿಂಹರಾಜ ಶಾಖೆಯ ಅಧ್ಯಕ್ಷರಾದ  ಲವಕುಮಾರ್  ಮಾತನಾಡಿ ಮಕ್ಕಳು ಗುರುಹಿರಿಯರನ್ನು ಗೌರವಿಸಬೇಕು. ಹಿರಿಯ ಸಾಧಕರ ಆದರ್ಶಗಳನ್ನು ಬದುಕಲ್ಲಿ ಅಳವಡಿಸಿಕೊಳ್ಳಬೇಕು.

- Advertisement -

ಓದು, ಕಲೆ, ಸಾಂಸ್ಕೃತಿಕ ವ್ಯಕ್ತಿತ್ವ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಸವರಾಜು, ಸದಸ್ಯರಾದ ಹನುಮಂತ ನಾಯಕ್, ಮೂರ್ತಿ, ನೇತ್ರ ತಜ್ಞ ಡಾ. ಪ್ರದೀಪ್ ಸಭೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ರೇಣುಕಾ ಎಲ್ಲರನ್ನು ಸ್ವಾಗತಿಸಿದರು. ಶಿಕ್ಷಕರಾದ ಗಾಯತ್ರಿ, ವಾಸಂತಿ, ಸೌಮ್ಯ ಉಪಸ್ಥಿತರಿದ್ದರು. ಶಿಕ್ಷಕರಾದ  ಸ್ವಾಮಿ  ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಇದೆ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತರಾದ  ಭೇರ್ಯ ರಾಮಕುಮಾರ್ ಅವರನ್ನು ಅಭಿನಂದಿಸಲಾಯಿತು.

- Advertisement -
- Advertisement -

Latest News

ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳನ್ನು ಸಮಾಜಮುಖಿಯಾಗಿಸುತ್ತದೆ – ಶಾಸಕ ಮನಗೂಳಿ

ಸಿಂದಗಿ --ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳನ್ನು ಸಮಾಜಮುಖಿಯನ್ನಾಗಿ ಮಾಡುತ್ತದೆ. ಇದು ವಿದ್ಯಾರ್ಥಿಗಳ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಅವರು ತಾಲೂಕಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group