ಮೋದಿ ವಿರುದ್ಧ ಖರ್ಗೆ ಹೇಳಿಕೆಗೆ ಈರಣ್ಣ ಕಡಾಡಿ ಖಂಡನೆ

Must Read

ಜನ ಕಾಂಗ್ರೆಸ್ ಅನ್ನು ಕಸದ ಬುಟ್ಟಿಗೆ ಹಾಕಿದ್ದಾರೆ

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷ ಸರ್ಪ ಎಂದು ಹೀಯಾಳಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉಗ್ರವಾಗಿ ಖಂಡಿಸಿದ್ದಾರೆ.

ಟ್ವೀಟ್ ಒಂದನ್ನು ಮಾಡಿರುವ ಅವರು ಪ್ರಧಾನಿ ಮೋದಿಯವರ ವಿರುದ್ಧ ಸೆಣಸಾಡಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ನಾಯಕರು ಒಂದಲ್ಲ ಒಂದು ಹತಾಶ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ.

ಈ ಹಿಂದೆ ಮೌತ್ ಕಾ ಸೌದಾಗರ್, ಚಾಯ್ ವಾಲಾ, ನೀಚ, ಹತ್ತು ತಲೆ ರಾವಣ ಎಂದು ಹೇಳಿದ್ದರು ಈಗ ಖರ್ಗೆಯವರು ವಿಷ ಸರ್ಪ ಎಂದು ಹೇಳುತ್ತಿದ್ದಾರೆ. ಈ ಎಲ್ಲ ಹೇಳಿಕೆಗಳ ಕಾರಣದಿಂದಲೇ ದೇಶದ ಜನ ಕಾಂಗ್ರೆಸ್ ಅನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂದಿರುವ ಅವರು, ಖರ್ಗೆಯವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದ್ದಾರೆ.

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group