spot_img
spot_img

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಸ್ಥಿತ್ವಕ್ಕೆ

Must Read

spot_img
- Advertisement -

ಸಿಂದಗಿ: ಪಟ್ಟಣದ ಜ್ಞಾನಭಾರತಿ ವಿದ್ಯಾ ಮಂದಿರದ ಶಾಲೆಯಲ್ಲಿ ಸಿಂದಗಿ ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ ಅನುದಾನಿತ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ್ ಉಮರಾಣಿ ಮಾತನಾಡಿ, ಸಂಘಟನೆ ಅನ್ನುವುದು ನಮ್ಮ ನೌಕರರ ಹಿತ ಕಾಪಾಡುವ ಸಲುವಾಗಿ ಒಗ್ಗಟ್ಟಿನಿಂದ ಹೋರಾಡಲು ಇರುವ ವೇದಿಕೆ. ಹಾಗಾಗಿ ಇಲ್ಲಿ ನಮ್ಮ ಕುಟುಂಬದ ಹಾಗೂ ಶಾಲೆಗಳ ಜವಾಬ್ದಾರಿ ನಮ್ಮವರ ಹಕ್ಕುಗಳ ಮತ್ತು ಬೇಡಿಕೆಗಳ ಬಗ್ಗೆ ಸಮಾಜಮುಖಿಯಾಗಿ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದರು.

ಜ್ಞಾನಭಾರತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ ಮಡಿವಾಳಯ್ಯ ಹಿರೇಮಠ ಕಾರ್ಯಕ್ರಮವನ್ನು ಉದ್ಘಾಟಿಸಿದರು.

- Advertisement -

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ ಬಿರಾದಾರ ಮಾತನಾಡಿ, ನೂತನ ಪದಾಧಿಕಾರಿಗಳು ನಮ್ಮ ಅನುದಾನಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದನೆ ಮಾಡಬೇಕು ಎಂದು ಎಲ್ಲಾ ನೂತನ ಪದಾಧಿಕಾರಿಗಳಿಗೆ ಶುಭಾಶಯಗಳನ್ನು ತಿಳಿಸಿದರು.

ಸಿಂದಗಿ ತಾಲೂಕಿನ ಅನುದಾನಿತ ಪ್ರಾತಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಬುಳ್ಳಪ್ಪ ಡಿ. ಉಪಾಧ್ಯಕ್ಷ ಶಿವಲಿಂಗ ಉಮ್ಮರಗಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಿಪುತ್ರ ಕಿರನಳ್ಳಿ ಸಹ ಕಾರ್ಯದರ್ಶಿ ಸುಭಾಸ ಪಾಟೀಲ, ಕೋಶಾಧ್ಯಕ್ಷರಾಗಿ ಅಶೋಕ ರಾಠೋಡ ಹಾಗೂ ಸಂಘಟನೆ ಕಾರ್ಯದರ್ಶಿಯಾಗಿ ರಾಮನಗೌಡ ಮಸಳಿ ಇವರನ್ನು ಸರ್ವಾನುಮತದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದೂ ಜಿಲ್ಲಾಧ್ಯಕ್ಷ ರಾಜಶೇಖರ ಉಮರಾಣಿಯವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಎಸ್. ಎಮ್. ಬಿರಾದಾರ, ರಾಜು ಭೈರಿ, ವಿಜಯಕುಮಾರ ವಪ್ಪಾರಿ, ಶಿವಾನಂದ ಹಿರೇಕುರುಬರ, ಬಸವರಾಜ ಶಿರೋಳಕರ್ ಮತ್ತು ತಾಲೂಕಿನ ಎಲ್ಲಾ ಅನುದಾನಿತ ಪ್ರಾಥಮಿಕ ಶಾಲೆಗಳ ಮುಖ್ಯಗುರುಗಳು ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.

- Advertisement -

ಮನೋಹರ್ ರೂಗಿ ಸ್ವಾಗತಿಸಿದರು. ಎಸ್. ಎ. ರಾಠೋಡ ನಿರೂಪಿಸಿದರು. ಶ್ರೀಮತಿ ಪ್ರೇಮಾ ನಾಯ್ಕ ವಂದಿಸಿದರು.

- Advertisement -
- Advertisement -

Latest News

ಮಹಿಳೆಯರು ಒಳ್ಳೆಯ ಗೃಹಿಣಿಯಾಗುವುದರ ಜೊತೆಗೆ ಸಾಹಿತಿಗಳಾಗಿಯೂ ಹೊರಹೊಮ್ಮುತ್ತಿದ್ದಾರೆ – ಶಾಸಕ ವಿಶ್ವಾಸ ವೈದ್ಯ

ಸವದತ್ತಿ : ಈಗಿನ ಮಹಿಳೆಯರು ಮನಸ್ಸು ಮಾಡಿದರೆ ಏನೆಲ್ಲವನ್ನು ಸಾಧಿಸಬಹುದು ಈಗಿನ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಮುಂದೆ ಇದ್ದಾರೆ ಅದರಂತೆ ಸಾಹಿತ್ಯದಲ್ಲಿಯೂ ಕೂಡ ಅವರು ಮುಂದೆ...
- Advertisement -

More Articles Like This

- Advertisement -
close
error: Content is protected !!
Join WhatsApp Group