spot_img
spot_img

‘ಬೋಧನಾ ವೃತ್ತಿಯಲ್ಲಿ ನೈತಿಕತೆ ಮತ್ತು ಮೌಲ್ಯಗಳು ಬಲು ಮುಖ್ಯ’ – ಸುರೇಶ ಕುಲಕರ್ಣಿ

Must Read

- Advertisement -

ಬೆಂಗಳೂರು ಜಯನಗರ 4ನೇ ಬ್ಲಾಕ್‍ನ ಯುವಪಥ , ವಿವೇಕ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧಾರವಾಡದ ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ್.ವಿ.ಕುಲಕರ್ಣಿ ಅವರಿಗೆ ಪ್ರಸ್ತುತ ವರ್ಷದ ಪಾಂಚಜನ್ಯ ಪುರಸ್ಕಾರವನ್ನು ನೀಡಿ ಪುರಸ್ಕರಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕುಲಕರ್ಣಿರವರು ಸಮಾಜ ಸುಧಾರಣೆಯಲ್ಲಿ ಶಿಕ್ಷಕನ ಪಾತ್ರ ಹೆಚ್ಚಿನ ಮಹತ್ವವನ್ನು ಹೊಂದಿದ್ದು ಇತರರಿಗೆ ಆದರ್ಶವಾಗಬೇಕು ಹಾಗು ತಮ್ಮ ಸೇವಾ ಮನೋಭಾವದಿಂದ ಜೀವನ ಸಾರ್ಥಕ ಗೊಳ್ಳುತ್ತದೆ ಎಂದು ತಿಳಿಸಿದರು.

ಆರ್.ವಿ.ಶಿಕ್ಷಣ ಸಮೂಹದ ನಿರ್ದೇಶಕರು – ಯೋಜನೆ ಡಾ.ಟಿ.ವಿ.ರಾಜು ರವರು ಪ್ರಶಸ್ತಿ ಪ್ರದಾನ ಮಾಡಿದರು.     

- Advertisement -

ಬಿಹೆಚ್‍ಎಸ್ ಉನ್ನತ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಡಾ.ಕೆ.ಎಸ್.ಸಮೀರ ಸಿಂಹ, ಮುಖ್ಯ ಅತಿಥಿಗಳಾಗಿ ವಿಶೇಷ ಆಹ್ವಾನಿತರಾಗಿ ಎಂಇಎಸ್ ಶಿಕ್ಷಣ ಸಮೂಹ ಶೈಕ್ಷಣಿಕ ನಿರ್ದೇಶಕರು ಡಾ.ಹೆಚ್.ಎಸ್.ಗಣೇಶ ಭಟ್ಟ ಪಾಲ್ಗೊಂಡ ಸಂವಾದದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ  ಶಿಕ್ಷಕರಿಗಿರಬೇಕಾದ ಮೌಲ್ಯಗಳನ್ನು ತಿಳಿಸಿದರು. ಅವರ ಮಾತುಗಳು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಜೀವನ ಪಾಠವಾಗಿತ್ತು. ದಕ್ಷಿಣ ಬೆಂಗಳೂರಿನಲ್ಲಿ ಪ್ರಶಿಕ್ಷಣಾರ್ಥಿ ಶಿಕ್ಷಕರಿಗೆ ಕೌಶಲ್ಯ ವರ್ಧಕ ಕಾರ್ಯಾಗಾರದಲ್ಲಿ  (ಪೈಲಟ್ ಕಾರ್ಯಕ್ರಮ) – ನಾಲ್ಕು ಪ್ರತಿಷ್ಠಿತ ಕಾಲೇಜುಗಳ ಬಿಎಡ್ ವಿದ್ಯಾರ್ಥಿಗಳನ್ನು ಭಾಗವಹಿಸಿದ್ದರು.

ಸಮಾಜ ಸುಧಾರಕ ಶಿಕ್ಷಕ ಮತ್ತು ಇಂದಿನ ಶಿಕ್ಷಣ ವ್ಯವಸ್ಥೆಯ ಬಗ್ಗೆ .ಎನ್ ಎಂ ಕೆ ಆರ್ ವಿ ಕಾಲೇಜಿನ ಮುಖ್ಯಸ್ಥ ಡಾ.ಟಿ. ಎನ್. ಲೋಕೇಶ್ ಸಂವಾದ ನಡೆಸಿಕೊಟ್ಟರು.

- Advertisement -

ನವೀನ ಬೋಧನಾ ವಿಧಾನಗಳಿಗಾಗಿ ಭವಿಷ್ಯದ ಶಿಕ್ಷಕರಲ್ಲಿ (ಬಿ.ಎಡ್ ವಿದ್ಯಾರ್ಥಿಗಳು) ಉತ್ಸಾಹವನ್ನು ಹುಟ್ಟುಹಾಕುವುದು. ಈ ವಿದ್ಯಾರ್ಥಿಗಳು ಮುಂದಿನ 2-3 ದಶಕಗಳಲ್ಲಿ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅವರು ವಿದ್ಯಾರ್ಥಿಗಳಿಗೆ ಜನಪ್ರಿಯ ಶಿಕ್ಷಕರಾಗುವುದು ಹೇಗೆ? ಬೋಧನಾ ವೃತ್ತಿಯಲ್ಲಿ ನೈತಿಕತೆ ಮತ್ತು ಮೌಲ್ಯಗಳ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡುವ ಕುರಿತು ಚರ್ಚಿಸಲಾಯಿತು. 

ಪ್ರಾಸ್ತಾವಿಕ ನುಡಿಗಳನ್ನಾಡಿದ ಸಂಸ್ಥಾಪಕ ಗೌ.ಕಾರ್ಯದರ್ಶಿ ಮುರಳಿ ಎಸ್.ಕಾಕೋಳು ಆಧ್ಯಾತ್ಮಿಕತೆಯ ತಳಹದಿಯ ಮೇಲೆ ಅಕ್ಷರ – ಆರೋಗ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪಾಂಚಜನ್ಯ ಪ್ರತಿಷ್ಠಾನದ ಕಳೆದ  ಹತ್ತು ವರ್ಷಗಳಿಂದ ಹಲವಾರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿದೆ . ಪ್ರತಿಷ್ಠಾನದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಕ್ಷರ, ಆರೋಗ್ಯ , ಅಧ್ಯಾತ್ಮ ಕ್ಷೇತ್ರದಲ್ಲಿನ ಸಾಧಕ ಶ್ರೇಷ್ಠರನ್ನು ಗುರುತಿಸಿ ಪಾಂಚಜನ್ಯ ಪುರಸ್ಕಾರ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಆರ್ಕಿಡ್ ಲ್ಯಾಮಿನೇಟ್ಸ್ ಪ್ರೈ ಲಿ. ಮತ್ತು ಬ್ಲೂನೀಮ್ ಮೆಡಿಕಲ್ ಡಿವೈಸೆಸ್ ಪ್ರೈ.ಲಿ. ರವರು ಪ್ರಾಯೋಜಿಸಿದ್ದರು. , ಪ್ರತಿಷ್ಠಾನ ಟ್ರಸ್ಟೀಗಳಾದ ಎಸ್.ವಿ.ಸುಬ್ರಹ್ಮಣ್ಯ  ಹಾಗು ವೆಂಕಟೇಶ ಆರ್. ವೇದಾಂತಿ ಉಪಸ್ಥಿತರಿದ್ದರು ವಿವರಗಳಿಗೆ 98450 75250

ಪ್ರಶಸ್ತಿ ಪುರಸ್ಕøತ ಕಿರು ಪರಿಚಯ : ಧಾರವಾಡದ ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ್.ವಿ.ಕುಲಕರ್ಣಿ  

ಶ್ರಿ ಸುರೇಶ್ ವಿ.ಕುಲಕರ್ಣಿ, ಬಿಎಸ್ಸಿ, ಬಿಎಡ್, ಎಂಎ, ಜಿಡಿ ಆಟ್ರ್ಸ್, ಜಿಡಿ ಮಾಡೆಲಿಂಗ್, ನಿವೃತ್ತ ಮುಖ್ಯೋಪಾಧ್ಯಾಯ   ಕೆ.ಇ. ಬೋರ್ಡ್, ಧಾರವಾಡ ಮತ್ತು ಪ್ರಸಿದ್ಧ ಕಲಾವಿದ ಮತ್ತು ದ ರಾ ಬೇಂದ್ರೆ ಕುರಿತು ಮಾತನಾಡುವ ವಾಗ್ಮಿ. ಶ್ರೀ ಕುಲಕರ್ಣಿಯವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಿ.ಇಡಿ ಪರೀಕ್ಷೆಯಲ್ಲಿ 4ನೇ ಸ್ಥಾನ ಪಡೆದರು; ವನ್ಯಜೀವಿ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಜಿ.ಡಿ.ಆಟ್ರ್ಸನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಪ್ರಕಟವಾಗುವ “ವಿಜ್ಞಾನ ಸಂಗತಿ” (ವಿಜ್ಞಾನ ಮಾಸಿಕ ಪತ್ರಿಕೆ) ಸಂಪಾದಕರಾಗಿದ್ದರು. ಆಕಾಶವಾಣಿ ಧಾರವಾಡದಿಂದ ಶ್ರೀ ಕುಲಕರ್ಣಿಯವರ 100ಕ್ಕೂ ಹೆಚ್ಚು ಕಾರ್ಯಕ್ರಮಗಳು ಪ್ರಸಾರವಾಗಿವೆ.

“ಸೇವಾಯಜ್ಞದಲ್ಲಿ…”

ಪಾಂಚಜನ್ಯ ಪ್ರತಿಷ್ಠಾನದ ಕಿರು ಪರಿಚಯ.  

 ಸಮಾನ ಮನೋಧರ್ಮದ ಗೆಳೆಯರು ಒಂದಾಗಿ ಗ್ರಾಮೀಣ ಪ್ರದೇಶದಲ್ಲಿ ಅಕ್ಷರ ,ಆರೋಗ್ಯ ಮತ್ತು ಅಧ್ಯಾತ್ಮ ವೆಂಬ ಮಂತ್ರಗಳ ಬುನಾದಿಯ ಮೇಲೆ ಭವ್ಯ ಸಮಾಜ ನಿರ್ಮಾಣದ ದೀಕ್ಷೆ ತೊಟ್ಟು, ಹಲವಾರು ಜನಮುಖಿ ಕಾರ್ಯಗಳನ್ನು ನಡೆಸುತ್ತ ಸಾರ್ಥಕ ಒಂದು ದಶಕದಿಂದ ನಿಸ್ವಾರ್ಥ ಚಿಂತನೆ ವಿಶಾಲದೃಷ್ಟಿಯಿಂದ ಸದ್ದಿಲ್ಲದೆ ಸೇವಾಕ್ರಾಂತಿ ಮಾಡುತ್ತ ಬಂದಿದೆ. ಪಾಂಚಜನ್ಯ ಮೊಳಗುವುದಕ್ಕಾಗಿ ಅಲ್ಲ, ದೀನರ ಬಾಳು ಬೆಳಗುವುದಕ್ಕಾಗಿ  ಉದಯವಾಗಿದೆ.

 ಪ್ರತಿ ವರ್ಷ ವಾರ್ಷಿಕೋತ್ಸವ ಸಂದರ್ಭದಲ್ಲಿ  ಅಕ್ಷರ ,ಆರೋಗ್ಯ ಮತ್ತು ಅಧ್ಯಾತ್ಮ ಕ್ಷೇತ್ರದಲ್ಲಿ ಅವಿರತ ಸೇವಾ- ಸಾಧನೆಯನ್ನು ಮಾಡುತ್ತಿರುವ ಸಾಧಕೋತ್ತಮರಿಗೆ ಪ್ರತಿಷ್ಠಿತ ಪಾಂಚಜನ್ಯ ಪುರಸ್ಕಾರ ಗೌರವಾರ್ಪಣೆ ಮಾಡಲಾಗುವುದು. 

ಸಹಾನುಭೂತಿಯ ಸಂವೇದನೆಯೊಂದಿಗೆ ಗಮನಿಸುವಾಗ ಬದಲಾವಣೆ ಹೇಗೆ ಸಾಧ್ಯ ಎಂದು ತಿಳಿಯದೇ ಅಸಹಾಯಕತೆಯೂ(ಯೇ) ಮನೆಮಾಡಿ ಜನರಲ್ಲಿ ಉದಾಸೀನ ಮೂಡುವುದು ಸಹಜ ,ಹಾಗಿರುವಾಗ ಬದಲಾವಣೆಯ ದಾರಿಯನ್ನು ತೋರಿಸಿ , ಪೋಷಿಸಿದಾಗ ಅಸಹಾಯಕತೆಯೂ ದೂರವಾಗುತ್ತದೆ. ಜೊತೆಗೆ ಕಣ್ಣಿಗೆ ಕಾಣುವ ಬದಲಾವಣೆಯೂ ಸಾಧ್ಯ ಎಂದು ಪಾಂಚಜನ್ಯ ಪ್ರತಿಷ್ಠಾನ ನಂಬಿಕೊಂಡು ಬಂದಿದೆ . ನಿಮಗೂ ಪಾಂಚಜನ್ಯ ಪ್ರತಿಷ್ಠಾನದೊಂದಿಗೆ ಜೋಡಿಸಿಕೊಳ್ಳಬೇಕೆನಿಸಿದರೆ ಕರೆಮಾಡಿ 98450 75250 ಹಾಗೂ ಸಮಾಜದಲ್ಲಿನ ಬದಲಾವಣೆಗೆ ಪಾತ್ರರಾಗಿರಿ .

- Advertisement -
- Advertisement -

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -

More Articles Like This

- Advertisement -
close
error: Content is protected !!
Join WhatsApp Group