ಎಲ್ಲರೂ ಕಡ್ಡಾಯವಾಗಿ ಕೋರೋನಾ ನಿಯಮಗಳನ್ನು ಎಲ್ಲರೂ ಪಾಲಿಸಲೇಬೇಕು: ಪ್ರಕಾಶ ಎಮ್ ಚನ್ನಪ್ಪನವರ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಸವದತ್ತಿ: ಸರಕಾರ ಹೇಳುತ್ತಿರುವುದು ಎಲ್ಲರ ರಕ್ಷಣೆಗಾಗಿ ಎಲ್ಲರ ಪ್ರಾಣ ಉಳಿಸುವುದಕ್ಕಾಗಿ ಸಾರ್ವಜನಿಕರ ರಕ್ಷಣೆಗಾಗಿ ಸರಕಾರ ಸಾಕಷ್ಟು ಶ್ರಮಿಸುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ಬಯಸುವುದಾದರೂ ಏನೆಂದರೆ ಎಲ್ಲರೂ ಕಡ್ಡಾಯವಾಗಿ ಮುಖಕ್ಕೆ ಮಾಸ್ಕನ್ನು ಕಡ್ಡಾಯವಾಗಿ ಧರಿಸಿ ಮನೆಯಿಂದ ಹೊರಬರಬೇಕು.

ಅನಾವಶ್ಯಕವಾಗಿ ತಿರುಗಾಡಬಾರದು ಕೊರೋನಾ ರೋಗವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಈಗಾಗಲೇ ಎಲ್ಲರಿಗೂ ಗೊತ್ತಿದ್ದಂತೆ ಈ ಸೊಂಕು ರೋಗದಿಂದ ಜನ ಸಾವನ್ನಪ್ಪುತ್ತಿದ್ದಾರೆ ಆದ್ದರಿಂದ ಈ ಮಾಹಾಮಾರಿ ಕೊರೋನಾ ರೋಗವನ್ನು ತಡೆಗಟ್ಟಬೇಕಾದರೆ ಎಲ್ಲರೂ ಕಡ್ಡಾಯವಾಗಿ ಕೋರೋನಾ ನಿಯಮಗಳನ್ನು ಎಲ್ಲರೂ ಪಾಲಿಸಲೇಬೇಕು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಮೊದಲು ನಾವು ಜೀವವನ್ನು ಉಳಿಸಿಕೋಳ್ಳೋಣ ನಂತರ ಬೇರೆ ವಿಷಯ. ಜೀವ ಇದ್ದರೆ ಜೀವನ, ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಎಮ್ ಚನ್ನಪ್ಪನವರ ಸಾರ್ವಜನಿಕರಿಗೆ ಕರೆ ನೀಡಿದರು.

ಅವರು ಪಟ್ಟಣದ ಆನೀ ಅಗಸಿಯಲ್ಲಿ ಮಹಾಮಾರಿ ಕೋರೋನಾ ಕೋವಿಡ್ -19 ಅರಿವು ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಕರೆ ನೀಡಿದರು. ಅವರು “ಸೊಂಕು ರೋಗ ಹರಡದಂತೆ ನೋಡಿಕೊಳ್ಳಲು ಸಾರ್ವಜನಿಕರ ಸಹಕಾರ ಅತೀ ಮುಖ್ಯವಾಗಿದೆ ತಮ್ಮ ತಮ್ಮ ಮನೆಗಳ ಸುತ್ತ ಮುತ್ತಲಿನ ವಾತಾವರಣ ಸ್ವಚ್ಚವಾಗಿಟ್ಟುಕೊಳ್ಳಬೇಕು. ತಮ್ಮ ಮನೆಯ ಹಸಿ ಕಸ ಮತ್ತು ಒಣ ಕಸವನ್ನು ಬೇರೆ ಬೇರೆ ಮಾಡಿ ಇಟ್ಟುಕೊಂಡು ನಮ್ಮ ಪುರಸಭೆ ಕಸದ ವಾಹನ ತಮ್ಮ ಮನೆ ಬಾಗಿಲಿಗೆ ಬಂದಾಗ ಅದನ್ನು ಬೇರ್ಪಡಿಸಿ ಹಾಕಬೇಕು. ಸ್ವಚ್ಚವಾದ ವಾತಾವರಣ ಸರಕಾರಿ ನೌಕರರಿಗೆ ಪೌರ ನೌಕರರಿಗಷ್ಟೇ ಅಲ್ಲ ಸಾರ್ವಜನಿಕರಿಗೂ ಬೇಕು. ಆದ್ದರಿಂದ ಈ ರೋಗವನ್ನು ಹೊಡೆದೋಡಿಸಬೇಕಾದರೆ ಸ್ವಚ್ಚವಾದ ವಾತಾವರಣ ಸ್ವಚ್ಚವಾದ ಪರಿಸರ ಬೇಕಾದರೆ ಸಾರ್ವಜನಿಕರೂ ಸಹ ಸಹಕಾರ ನೀಡಬೇಕು” ಎಂದು ಮಾತನಾಡಿದರು.

- Advertisement -

ಈ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪುರಸಭೆ ಸಿಬ್ಬಂದಿಗಳಾದ ಎಮ್ ಆಯ್ ಪಾಟೀಲ.ಬಿ ಎಚ್ ಆನಿ. ಎಸ ಎ ಕುದರಿ. ಆರ ಎಸ್ ಹಿರೇಹೊಳಿ. ಅಶೋಕ ಬಾಗೇವಾಡಿ . ಹನುಮಂತ ಮೂಡಲಗಿ. ಮೈಲಾರಿ ಕಾಳೆ. ದುರಗಪ್ಪ ಜಂಬುದೀಪ.ಪ್ರವೀಣ ಕರಡಿ. ಉಪಸ್ಥಿತರಿದ್ದರು

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!