ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ – ಅಶೋಕ ಮನಗೂಳಿ

Must Read

ಸಿಂದಗಿ – ಇಡೀ ದೇಶದಲ್ಲಿ ಕಳೆದ 2 ವರ್ಷಗಳಿಂದ ಮಹಾಮಾರಿ ಕರೋನಾ ಹರಡಿ ಜನಜೀವನ ಅಸ್ತವ್ಯಸ್ತಗೊಂಡಿದೆ ಅಲ್ಲದೆ ಈವಾಗ್ಗೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದ್ದು ಕಾರಣ 18 ವರ್ಷದ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ಸಂಸ್ಥೆಯ ಅಧ್ಯಕ್ಷರು ಮತ್ತು ಸಿಂದಗಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಸಲಹೆ ನೀಡಿದರು.

ಪಟ್ಟಣದ ತಾಲೂಕಾ ಶಿಕ್ಷಣ ಮಂಡಳಿಯ ಸಿ.ಎಂ.ಮನಗೂಳಿ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್‍ಎಸ್‍ಎಸ್ ಘಟಕ ಮತ್ತು ತಾಲೂಕು ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಧ್ಯಾರ್ಥಿಗಳಿಗೆ ಉಚಿತ ಲಸಿಕಾ ಅಭಿಯಾನವನ್ನು ಚಾಲನೆ ನೀಡಿ ಮಾತನಾಡಿ, ಕರೋನಾ 2ನೇ ಅಲೆಯಲ್ಲಿ ನಾವು ಅನೇಕರನ್ನು ಕಳೇದುಕೊಂಡಿದ್ದೇವೆ ಅದಕ್ಕೆ ಜಾಗೃತರಾಗಿ ಮುಂಬರುವ ಡೆಡ್ಲಿ ವೈರಸ್ ತಡೆಗಟ್ಟಲು ಎಲ್ಲರು ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಜರ್ ಬಳಕೆ ಮಾಡುವುದರೊಂದಿಗೆ ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಶಿರೂಗೌಡ ದೇವರಮನಿ, ಪ್ರಾಚಾರ್ಯ ಡಾ.ಎ.ಬಿ.ಸಿಂದಗಿ, ಪ್ರೋ ಎಂ.ಜಿ.ಬಿರಾದಾರ ಸೇರಿದಂತೆ ಅನೇಕರಿದ್ದರು.

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...

More Articles Like This

error: Content is protected !!
Join WhatsApp Group