ಎಲ್ಲರೂ ವ್ಯಾಕ್ಸಿನ್ ಪಡೆದುಕೊಂಡು ಕೊರೋನಾದಿಂದ ದೂರವಿರಬೇಕು – ಅರುಣ ಶಹಾಪೂರ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಸಿಂದಗಿ – ಕಳೆದ ವರ್ಷದಿಂದ ಬಡಜನತೆ ಬಸವಳಿದ ಸಂದರ್ಭದಲ್ಲಿ ಸರಕಾರ ಉಚಿತವಾಗಿ ವಾಕ್ಸಿನ್ ನೀಡುತ್ತಿದೆ ಇದರ ಸದುಪಯೋಗ ಪಡೆದುಕೊಂಡು ರೋಗದಿಂದ ಮುಕ್ತರಾಗಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಅಭಿಮತ ವ್ಯಕ್ತಪಡಿಸಿದರು.

ಪಟ್ಟಣದ ಅಂಜುಮನ್ ಪ ಪೂ ಕಾಲೇಜಿನ ಸಭಾಭವನದಲ್ಲಿ ತಾಲೂಕಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಸಮನ್ವಾಯಾಧಿಕಾರಿಗಳ ಕಾರ್ಯಾಲಯ ಇವುಗಳ ಸಹಯೋಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ಹಾಗೂ ಬೋಧಕೇತರರಿಗೂ ಕೋವಿಡ್-೧೯ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ವೈದ್ಯರ ಕೊರತೆಯನ್ನು ಮುಂದಿಟ್ಟುಕೊಂಡು ಸರಕಾರದ ಮೇಲೆ ಗೂಬೆ ಕೂರಿಸುವುದಲ್ಲ ಅದನ್ನು ತಡೆಗಟ್ಟಲು ಸ್ವಯಂ ಪ್ರೇರಿತರಾಗಿ ಮುಂದೆ ಬರಬೇಕಾಗಿದೆ ನಮ್ಮ ಪ್ರಾಣ ರಕ್ಷಣೆ ನಾವೇ ಮಾಡಿಕೊಳ್ಳಬೇಕು. ನಿರೀಕ್ಷೆ ಸಹಜ ಆದರೆ ಅದರ ನಿರ್ವಹಣೆ ಕಷ್ಟಕರ ಸಂಗತಿ ಸರಕಾರ ನೀಡಿದ ವಾಕ್ಸಿನ್ ಪಡೆದು ಅಂಬಾಸಿಡರರಂತೆ ಕಾರ್ಯ ನಿರ್ವಹಿಸೋಣ ಎಂದರು.

ರಾಜ್ಯದಲ್ಲಿ 1 ಕೋಟಿ 10 ಲಕ್ಷ ಮಕ್ಕಳು ಪರೀಕ್ಷೆಯಿಂದ ಸುರಕ್ಷತೆಯಿಂದಿರಬೇಕು ಎನ್ನುವ ದೃಷ್ಟಿಕೋನದಲ್ಲಿ ಎಸ್.ಎಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಬೇಕೋ ಬೇಡವೋ ಎನ್ನುವ ಚಿಂತನೆಯಲ್ಲಿದ್ದೇವೆ ಅದಕ್ಕೆ ಶಿಕ್ಷಕರಿಗೆ ಅಪಾಯವಿದೆ ಎನ್ನುವುದು ಕಠೋರ ಸತ್ಯ. ದೇಹಕ್ಕೆ ಬೇಕಾಗುವ ಕೆಲಸವನ್ನು ವಾಕ್ಸಿನ್ ತಡೆಗಟ್ಟುತ್ತವೆ ಕಾರಣ ಶಿಕ್ಷಕರು ಕೋವಿಡ್-೧೯ ವಾಕ್ಸಿನ್ ಹಾಕಿಸಿಕೊಂಡರೆ ಆಯಾ ಶಾಲೆಯ ಮಕ್ಕಳನ್ನು ಜೀವದ ಅಪಾಯದಿಂದ ಕಾಪಾಡಿದಂತಾಗುತ್ತದೆ ಅಲ್ಲದೆ ಶಿಕ್ಷಕರು ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

- Advertisement -

ಸಾರ್ವಜನಿಕ ಆಸ್ಪತ್ರೆಯ ಡಾ. ಮಹಾಂತೇಶ ಹಿರೇಮಠ ಮಾತನಾಡಿ, ತಾಲೂಕಿನ 16 ನೂರು ಶಿಕ್ಷಕರಲ್ಲಿ ಪ್ರತಿಶತ 5 ರಷ್ಟು ಶಿಕ್ಷಕರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದು ಇದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ.

ಪ್ರತಿಯೊಬ್ಬ ಶಿಕ್ಷಕರು ಲಸಿಕೆ ಹಾಕಿಸಿಕೊಂಡು ಜಾಗೃತಿ ಮೂಡಿಸಿದರೆ ಪ್ರತಿ ಹಳ್ಳಿಗಳಲ್ಲಿ ಜನತೆ ತಾನಾಗಿಯೇ ಮುಂದೆ ಬರುತ್ತಾರೆ ಕಾರಣ ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಶಿಕ್ಷಕರು ಸಹಯೋಗದಲ್ಲಿ ಈ ಅಭಿಯಾನ ಯಶಸ್ವಿಗೆ ಸಹಕಾರಿಯಾಗಬೇಕು ಎಂದು ಮನವಿ ಮಾಡಿಕೊಂಡರು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ ಸಂಜೀವಕುಮಾರ ದಾಸರ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಸ್.ಮಲ್ಲೇದ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಎಚ್.ಬಿರಾದಾರ, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ, ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ, ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ, ಶಿಕ್ಷಕರ ಸಂಘದ ಪ್ರತಿನಿಧಿಗಳಾದ ಆನಂದ ಭೂಸನೂರ, ಎ.ಎಚ್.ವಾಲೀಕಾರ, ಸಿ.ಬಿ.ಗಡಗಿ, ಎನ್.ಜಿ.ಉಪ್ಪಾರ ವೇದಿಕೆ ಮೇಲಿದ್ದರು.

ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎ.ಬಿರಾದಾರ ನಿರೂಪಿಸಿದರು. ಶಿಕ್ಷಣ ಸಂಯೋಜಕ ಸುಧೀರ ಕಮತಗಿ ವಂದಿಸಿದರು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!