ಪ್ರತಿಯೊಬ್ಬರೂ ಮನೆ ಮನೆಗೆ ರಾಷ್ಟ್ರಧ್ವಜ ಹಾರಿಸಬೇಕು

Must Read

ಸಿಂದಗಿ: 75ನೇ ವರ್ಷದ ಆಜಾದಿ ಅಮೃತ ಮಹೋತ್ಸವದ ನಿಮಿತ್ತ ಇಡೀ ದೇಶಾದ್ಯಂತ ಆ. 13ರಿಂದಲೇ ಹರ್ ಘರ್ ತಿರಂಗಾ ಹಾರಿಸಬೇಕು ಎಂದು ಆದೇಶ ಬಂದಿದ್ದು ಸಕಲ ಗೌರವದೊಂದಿದೆ ತ್ರಿರಂಗಾ ಧ್ವಜ ಹಾರಿಸಿ ಈ ರಾಷ್ಟ್ರೀಯ ಹಬ್ಬದಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ತಾಪಂ ಇಓ ಬಾಬು ರಾಠೋಡ ತಾಲೂಕಿನ ಸಮಸ್ತ ಸಾರ್ವಜನಿಕರಲ್ಲಿ ಕೋರಿದರು.

ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅದೇ ರೀತಿಯಲ್ಲಿ 15 ರಂದು ಬೆಳಿಗ್ಗೆ 7.45ರ ಒಳಗೆ ಎಲ್ಲ ಸರ್ಕಾರಿ, ಅರೆ ಸರ್ಕಾರಿ ಕಚೇರಿ ಮತ್ತು ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನಡೆಸಬೇಕು. ನಂತರ 8.00ಕ್ಕೆ ತಹಶೀಲ್ದಾರ್ ಆವರಣಕ್ಕೆ ಆಗಮಿಸಬೇಕು, ತಾಲೂಕು ಕ್ರೀಡಾಂಗಣದಲ್ಲಿ ಬೆಳಿಗ್ಗೆ ಸರಿಯಾಗಿ 9 ಗಂಟೆಗೆ ಆರಂಭವಾಗುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಅಂದು ಆಯಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ಹಂಚಿಕೆಯಂತೆ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಕಾರ್ಯಕ್ರಮಕ್ಕೆ ತಾಲೂಕಾಡಳಿತದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಬಿಇಓ ಎಚ್.ಎಂ.ಹರನಾಳ ಮಾತನಾಡಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರ್ಯಾಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ, ಹಾಗೂ ಅಭಿನಂದನಾ ಪತ್ರ ನೀಡಲಾಗುವುದು ಎಂದು ಅಗತ್ಯವಿರುವಷ್ಟು ವೈದ್ಯಕೀಯ ಸಿಬ್ಬಂದಿ ಮತ್ತು ಅಂಬುಲೆನ್ಸ್ ವ್ಯವಸ್ಥೆ ಇರಬೇಕು. ಅಂದು ಕ್ರೀಡಾಂಗಣದ ಸುತ್ತಲೂ ಸುಗಮ ಸಂಚಾರಕ್ಕೆ ವ್ಯವಸ್ಥೆ ಇರುವ ಹಾಗೆ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಪುರಸಭೆ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ ಮಾತನಾಡಿ, 75ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಭಾರತ ಸರ್ಕಾರ ಹರ್ ಘರ್ ತಿರಂಗಾ ಪ್ರತಿ ಮನೆ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ ಆಜಾದಿ ಅಮೃತ್ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು ಉತ್ತಮ ನೇಕಾರರಿಂದ ನೇಯ್ದ ರಾಷ್ಟ್ರಧ್ವಜಗಳು ಪುರಸಭೆಯಲ್ಲಿ ದೊರೆಯುತ್ತವೆ ಕೊಂಡುಕೊಂಡು ಧ್ವಜಕ್ಕೆ ಗೌರವ ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಕ್ರೀಡಾಂಗಣದ ಸ್ವಚ್ಚತೆ ವ್ಯವಸ್ಥೆ, ವೇದಿಕೆ ಮತ್ತು ಕಾರ್ಯಕ್ರಮ ನಿರ್ವಹಣೆ, ಪಥ ಸಂಚಲನ ಹಾಗೂ ಧ್ವಜದ ವ್ಯವಸ್ಥೆ, ಆರೋಗ್ಯ ಮತ್ತು ಮುಂಜಾಗ್ರತಾ ಕ್ರಮಗಳು, ಸ್ವಚ್ಛತೆ, ಕವಾಯತ್ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ವ್ಯವಸ್ಥೆಗಳಿಗಾಗಿ ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕ ಡಾ. ಎಚ್.ವೈ.ಸಿಂಗೇಗೋಳ, ಆರೊಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ, ಸಿಡಿಪಿಓ ಬಸವರಾಜ ಜಿಗಳೂರ, ನೌಕರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಮ್ ಹರನಾಳ, ಶಿರಸ್ತೆದಾರ ಜಿ.ಎಸ್.ರೋಡಗಿ, ಸಿ.ಎಂ.ಮನಗೂಳಿ ಕಾಲೇಜಿನ ಎಂ.ಜಿ.ಬಿರಾದಾರ, ಜಿ.ಪಿ.ಪೋರವಾಲ ಕಾಲೇಜಿ ಪ್ರಾಚಾರ್ಯ ವ್ಹಿ.ಡಿ.ಪಾಟೀಲ, ಡಾ. ಪ್ರಕಾಶ ರಾಠೋಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group