ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು – ರವಿ ಗೋಲಾ

Must Read

ಸಿಂದಗಿ: 18 ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಹಾಗೂ ಯಾವುದೇ ವ್ಯಕ್ತಿಯು ಚುನಾವಣಾ ಆಮಿಷಗಳಿಗೆ ಒಳಗಾಗದೆ ಒಳ್ಳೆಯ ಅಭ್ಯರ್ಥಿಯನ್ನು ಆರಿಸಿ ತರಬೇಕು ಎಂದು ವಕೀಲರ ಸಂಘ ಅಧ್ಯಕ್ಷ ಎಸ.ಬಿ.ದೊಡಮನಿ ಹೇಳಿದರು.

ಪಟ್ಟಣದ ಜಿ.ಪಿ. ಪೋರವಾಲ ಮಹಾವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪುರಸಭೆ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನದ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿವಿಲ್ ನ್ಯಾಯಾಧೀಶ ರಮೇಶ ಗಾಣಿಗೇರ ಕೆಲವು ಹಿಂದಿನ ಚುನಾವಣಾ ದತ್ತಾಂಶ ಪರಿಶೀಲಿಸಿದರೆ ಹಿಂದಿನ ಚುನಾವಣೆಗಳಲ್ಲಿ ಮತದಾನ ಮಾಡಿದವರ ಸಂಖ್ಯೆ ತುಂಬಾ ಕಡಿಮೆ ಇರುತ್ತದೆ ಮತ್ತು ಮತದಾನವನ್ನು ಪ್ರತಿಯೊಬ್ಬ ವ್ಯಕ್ತಿಯು ಕಡ್ಡಾಯವಾಗಿ ಮಾಡುವ ಮೂಲಕ ಪ್ರಜಾಪ್ರಭುತ್ವದ ಆಸೆಯನ್ನು ನೆರವೇರಿಸಬೇಕು ಅಲ್ಲದೆ ಸ್ವಾತಂತ್ರ್ಯ ಪೂರ್ವದಲ್ಲಿ ನಮಗೆ ಯಾವುದೇ ರೀತಿ ಮತದಾನದ ಹಕ್ಕು ಇರಲಿಲ್ಲ. ರಾಜನ ಆಡಳಿತ, ಸರ್ವಾಧಿಕಾರ ಇಂತಹ ವ್ಯವಸ್ಥೆಯಲ್ಲಿ ರಾಜನ ಆದೇಶವೇ ಪರಮಾದೇಶವಾಗಿರುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ತಮ್ಮ ಅಭಿವೃದ್ಧಿಗೆ ಶ್ರಮಿಸುವ ಅಭ್ಯರ್ಥಿಯನ್ನು ಆರಿಸಿ ತರಬೇಕು ಎಂದರು.

ಸಹಾಯಕ ಸರಕಾರಿ ವಕೀಲರು ವಿ.ಬಿ.ಪಾಟೀಲ “ಪ್ರತಿಯೊಬ್ಬ ಪ್ರಜೆಯು ಕಾನೂನಿನ ಅರಿವನ್ನು ಪಡೆದುಕೊಳ್ಳಬೇಕು. ಕಾನೂನು ಅರಿವು ಇಲ್ಲದೇ ಕಾನೂನಿನ ನೆರವು ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ದಿನನಿತ್ಯದ ಅಗತ್ಯಗಳಿಗೆ ಬೇಕಾದ ಸ್ವಲ್ಪಮಟ್ಟಿನ ಕಾನೂನಿನ ಅರಿವನ್ನಾದರೂ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ದೈಹಿಕ ನಿರ್ದೆಶಕ ರವಿ ಗೋಲಾ ಮಾತನಾಡಿ, “ರಾಷ್ಟ್ರೀಯ ಮತದಾರರ ದಿನವನ್ನು ಜನರಲ್ಲಿ ಮತದಾನದ ಕುರಿತು ಅರಿವು ಮೂಡಿಸಲು ಆಚರಿಸಲಾಗುತ್ತಿದ್ದು, ಎಲ್ಲರೂ ಕಡ್ಡಾಯವಾಗಿ ಮತದಾನವನ್ನು ಮಾಡಬೇಕು ಎಂದರು.

ಮಹಾವಿದ್ಯಾಲಯದ ಪ್ರಾಂಶುಪಾಲ ಡಿ.ಎಮ್.ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮುದುಗೋಳಕರ, ನೋಡಲ ಅಭಿಯಂತರ ದಯಾನಂದ ಇವಣಿ ಹಾಗೂ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಇದ್ದರು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group