- Advertisement -
ದಿನಾಂಕ 15/08/2024 ರಂದು ಜಿಲ್ಲಾ ಪಂಚಾಯತ್ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಬೆಳಗಾವಿ ರವರ ಮಾಗ೯ದರ್ಶನದಂತೆ ಹಾಗೂ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ ” ಗ್ರಾಮೋದಯ ಬೈಲಹೊಂಗಲ ” ಇವರ ಸಹಯೋಗದೊಂದಿಗೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ, ಬೆಳಗಾವಿ ತಾಲೂಕಿನ ಬಸ್ತವಾಡ ಹಾಗೂ ಯಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟನೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ನೆರವೇರಿಸಿದರು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಈ ಕಾರ್ಯಕ್ರಮ ಕುರಿತು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಡಿ. ಪಿ. ಎಮ್ ಅಧಿಕಾರಿಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಆಶಾ ಅಂಗನವಾಡಿ ಕಾರ್ಯಕರ್ತರು, ನೀರು ಗಂಟಿಗಳು, ಶಾಲಾ ಮಕ್ಕಳು, ಗ್ರಾಮದ ಗ್ರಾಮಸ್ಥರು ಭಾಗವಹಿಸಿದ್ದರು.