ತಾ. ಪಂ ಪ್ರಗತಿ ಪರಿಶೀಲನಾ ಸಭೆ ; ಬಾಕಿ ಉಳಿದ ಕಾಮಗಾರಿಯನ್ನು ಚುರುಕುಗೊಳಿಸಿ: ಶಾಸಕ ಸತೀಶ ಜಾರಕಿಹೊಳಿ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಬೆಳಗಾವಿ: ” ಕ್ಷೇತ್ರದಲ್ಲಿ ಬಾಕಿ ಉಳಿದ ಕಾಮಗಾರಿಯನ್ನು ಚುರುಕುಗೊಳಿಸಿ, ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಿ” ಎಂದು ಅಧಿಕಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ಸೂಚನೆ ನೀಡಿದರು.

ಇಲ್ಲಿನ ತಾ.ಪಂ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ, 14 ಗ್ರಾ.ಪಂ ವ್ಯಾಪ್ತಿಯ ನರೇಗಾ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಫಲಾನುಭವಿಗಳಿಗೆ ಅನುಕೂಲವಾಗುವ ಸರ್ಕಾರದ ಯೋಜನೆಗಳಿಗೆ ಶೀಘ್ರವೇ ಅನುಮತಿ ನೀಡಿ, ಕ್ಷೇತ್ರದಲ್ಲಿ ಬಾಕಿ ಉಳಿದ 23 ಕೋಟಿ ರೂ. ಅನುದಾನಲ್ಲಿ ಶಾಲಾ ಕಟ್ಟಡ, ತಡೆ ಗೋಡೆ, ಶೌಚಾಲಯ ನಿರ್ಮಾಣವಾಗಲಿ. ಕಾರ್ಮಿಕರ ವೇತನ ಬಿಟ್ಟು , ಅನಗತ್ಯವಾಗಿ ಅನುದಾನ ಬಳಕೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

- Advertisement -

ಯಮಕನಮರಡಿ 14 ಗ್ರಾಮಗಳಲ್ಲಿನ ಶಾಲಾ ತಡೆಗೋಡೆಗಳ ಕಾಮಗಾರಿ ಶೀಘ್ರವೇ ಮುಗಿಸಿ, ನಿಮ್ಮ ವ್ಯಾಪ್ತಿಯಲ್ಲಿ ಬರುವ ಗೋಡೆಗಳ ನಿರ್ಮಾಣಕ್ಕೆ ತಕರಾರು ಬಂದರೆ ಸ್ಥಳೀಯರ ಅನುಮತಿ ಪಡೆದು ಸುತ್ತಳತೆ ನೋಡಿಕೊಂಡು ಕಾಮಗಾರಿ ಪೂರ್ಣಗೊಳಿಸಿ ಎಂದರು.

ಜಾನುವಾರು ಸುರಕ್ಷತೆಗೆ ಬೆಡ್ ಬೇಕಿದೆ ; ಮನವಿ

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಸಹಾಯಕ ನಿರ್ದೇಶಕ ರಾಜೇಂದ್ರ ಮೊರಬದ್ ಅವರು ಮಾತನಾಡಿ, ಜಾನುವಾರುಗಳ ಸುರಕ್ಷತೆಗಾಗಿ ಬೆಡ್ ಅವಶ್ಯಕತೆ ಇದೆ. ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಮನೆಗಳಿಗೆ ಬೆಡ್ ನಿರ್ಮಾಣಕ್ಕೆ ಒಳ್ಳೆಯ ಪ್ರಶಂಸೆ ಸಿಕ್ಕಿದೆ. ಈಗಿರುವ ಅನುದಾನದಲ್ಲಿ ಬೆಡ್ ನಿರ್ಮಾಣ ಹಣ ಸಾಲುತ್ತಿಲ್ಲ. ಸರ್ಕಾರ ಹೆಚ್ಚುವರಿಯಾಗಿ 10 ಸಾವಿರ ನೀಡಿದರೆ ಮೇಲ್ಚಾವಣಿ ನಿರ್ಮಾಣಕ್ಕೆ ಅನುಕೂಲವಾಗುತ್ತದೆ. ಸರ್ಕಾರ ಇದರ ಗಮನ ಹರಿಸಬೇಕೆಂದು ಶಾಸಕರ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಹೊಸ ವಂಟಮೂರಿಗೆ ಪಿಡಿಓ ಕೊರತೆ :

ಹೊಸ ವಂಟಮೂರಿ ಗ್ರಾ.ಪಂಗೆ ಕಳೆದ ಮೂರು ವರ್ಷಗಳಿಂದ ಪಿಡಿಓ ಕೊರತೆ ಇದೆ‌. ಎರಡು ತಿಂಗಳವರೆಗೂ ಮಾತ್ರ ಪಿಡಿಓ ಕಾರ್ಯ ನಿರ್ವಹಿಸುತ್ತಾರೆ.‌ ಬಳಿಕ ಪಿಡಿಓಗಳು ಗ್ರಾ.ಪಂ ಗೆ ಬರುವುದೇ ಅಪರೂಪವಾಗಿದೆ ಹೀಗಾಗಿ ಚಿಕ್ಕ ಪುಟ್ಟ ಕೆಲಸಗಳು ನೆನೆಗುದಿಗೆ ಬಿದ್ದಿವೆ ಎಂದು ಗ್ರಾ.ಪಂ ಅಧ್ಯಕ್ಷ ಆರೋಪಿಸಿದರು, ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ನಿರಂತರವಾಗಿ ಕಾರ್ಯನಿರ್ವಸುವ ಪಿಡಿಓ ನೇಮಕ ಮಾಡಲಾಗುವುದು. ಅಲ್ಲಿವರೆಗೂ ಕಾಮಗಾರಿ ಬಾಕಿ ಉಳಿಸಬೇಡಿ ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ ಇಓ ರವಿ ಕರಲಿಂಗನ್ನವರ , ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದ್ದರು.

- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!