ಕೋಚರಿ ಸರಕಾರಿ ಪ್ರೌಢಶಾಲೆಯ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾದ ಕಸಾಪ ತಾಲೂಕಾಧ್ಯಕ್ಷ ಪ್ರಕಾಶ ಅವಲಕ್ಕಿ ಮಾತನಾಡಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಪೂರಕವಾಗಿದ್ದು, ಅಂಕ ಗಳಿಸುವುದೇ ಸರ್ವಾಂಗೀಣ ಅಭಿವೃದ್ಧಿಯಾಗಲಾರದು, ಓದಿನ ಜೊತೆಗೆ ಸಹಪಠ್ಯ ಚಟಿವಟಿಕೆ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ಆದರ್ಶ ವಿದ್ಯಾರ್ಥಿಗಳೆನಿಸುವರು ಎಂದು ಹೇಳಿದರು.
ಉದ್ಘಾಟಕರಾಗಿ ಎಸ್.ಡಿ.ಎಂ.ಸಿ ಅಧ್ಯಕ್ಷ ರಾಮಪ್ಪಾ ಚೌಗಲಾ, ಉಪಾಧ್ಯಕ್ಷ ಮಲಗೌಡಾ ಪಾಟೀಲ ಆಗಮಿಸಿ ಜ್ಯೋತಿ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯೋಪಾಧ್ಯಾಯರಾದ ಆರ್.ಬಿ. ವಠಾರೆ ಅಧ್ಯಕ್ಷತೆ ವಹಿಸಿದ್ದರು. ಶಿವಾನಂದ ಗುಂಡಾಳಿ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಕನ್ನಡ ವಿಷಯದಲ್ಲಿ 125 ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳನ್ನು ಕಸಾಪ ತಾಲೂಕು ಘಟಕದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಶ್ರೀಮತಿ ಮಂಗಲ ಕಂಕಣವಾಡಿ ಕಾರ್ಯಕ್ರಮ ನಿರೂಪಿಸಿದರು, ಬಿ.ಎ. ಮಠಪತಿ ವಂದಿಸಿದರು.

