- Advertisement -
ಮೂಡಲಗಿ – “ನನ್ನ ಮಣ್ಣು ನನ್ನ ದೇಶ” ಅಭಿಯಾನದ ಅಂಗವಾಗಿ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮೂಲಕ ದೆಹಲಿಗೆ ತೆರಳುತ್ತಿರುವ “ಅಮೃತ ಕಳಸ ಯಾತ್ರೆ”ಯ ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿಸುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರ್ನಾಟಕದ ಕಾರ್ಯಕರ್ತರನ್ನು ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ರಾಜ್ಯ ಕಾರ್ಯದರ್ಶಿಗಳಾದ ಜಗದೀಶ್ ಹಿರೇಮನಿ, ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆ, ನೈಋತ್ಯ ರೈಲ್ವೆ, ಬೆಂಗಳೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಮಾಥೂರ್, ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ತ್ರಿನೇತ್ರ ಕೆ.ಆರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.