ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

Must Read

ಬೀದರ – ಗಡಿ ಜಿಲ್ಲೆ ಬೀದರ್ ನ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುರುನಾಥ ಅಣ್ಣೆಪ್ಪ ಗಾಮಾ (52) ಮೃತ ರೈತ.

ಇವರು ಕೃಷಿ ಚಟುವಟಿಕೆಗಳಿಗಾಗಿ ಎಸ್.ಬಿ.ಐ ಬ್ಯಾಂಕ್ ನಲ್ಲಿ ರೂ 3 ಲಕ್ಷ, ಕೆಜಿಬಿ ಬ್ಯಾಂಕ್ ನಲ್ಲಿ ರೂ 1.20 ಲಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಲ್ಲಿ ರೂ 1 ಲಕ್ಷ ಸೇರಿದಂತೆ ಖಾಸಗಿ ಹಣಕಾಸು ಸಂಸ್ಥೆಯಿಂದ ಸಾಲ ಪಡೆದಿದ್ದರು.

ಅದನ್ನು ತೀರಿಸುವ ಕುರಿತು ಯೋಚನೆ ಮಾಡುತ್ತಿದ್ದರು. ಇದರಿಂದ ಜಿಗುಪ್ಸೆಗೊಂಡು ತಮ್ಮ ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪತ್ನಿ ಭಾಲ್ಕಿ ಗ್ರಾಮೀಣ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group