ರೈತರ ಬಾಕಿ ಹಣ ಕೊಡಿಸಲು ದಿಟ್ಟ ಕ್ರಮ ಕೈಗೊಂಡಿದ್ದೇವೆ – ಮುನೇನಕೊಪ್ಪ

Must Read

ಬೀದರ -ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಕೊಡಿಸುವಲ್ಲಿ ನಮ್ಮ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ನಾವು ರೈತರ ಪರವಾಗಿದ್ದೇವೆ. ರೈತರ ಹಣ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳ ಮೇಲೆ ಕ್ರಮ ಕೂಡ ಕೈಗೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ಬೀದರ್ ಜಿಲ್ಲೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅವರು ಪತ್ರಕರ್ತರೊಡನೆ ಮಾತನಾಡಿದರು.

ಮುಂದಿನ ದಿನಗಳಲ್ಲಿ ರೈತರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದೇವೆ. ನೂತನ ಎಥೆನಾಲ್ ಪಾಲಿಸಿ ಕೂಡ ಜಾರಿಗೆ ಬರಲಿದೆ ಎಂದರು.

ಇನ್ನು ಮುಂದೆ ಬಸವಕಲ್ಯಾಣ ಅನುಭವ ಮಂಟಪದ ಕಾರ್ಯ ಸುಗಮವಾಗಿ ನಡೆಯುವಂತೆ ಕೆಲಸ ಮಾಡುತ್ತೇನೆ ಎಂದ ಅವರು, ಸರ್ಕಾರದಿಂದ ಹಣ ಬಿಡುಗಡೆಯಾಗಿದ್ದು ಕಾನೂನಾತ್ಮಕವಾಗಿ ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳೊಡನೆ ಚರ್ಚಿಸಿ ಬಹುಬೇಗನೆ ಕಾಮಗಾರಿಯ ಕಾರ್ಯರೂಪಕ್ಕೆ ತರಲಾಗಿವುದು ಎಂದರು.

ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಯಾಗಿದ್ದಾಗ ಬಸವಕಲ್ಯಾಣದ ಅನುಭವ ಮಂಟಪ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದ ಒಂದು ವರ್ಷದಿಂದ ಅನುಭವ ಮಂಟಪ ಕಾರ್ಯ ಕೆಲಸ ನೆನೆಗುದಿಗೆ ಬಿದ್ದಿದ್ದು ಅದನ್ನು ಇನ್ನು ಮುಂದೆ ಮುಂದುವರೆಸಲಾಗುವುದು ಎಂದರು

ಬೀದರ್ ಜಿಲ್ಲೆಯ ಬಸವಣ್ಣನವರು ನಡೆದಾಡಿದ ಪುಣ್ಯ ಭೂಮಿ ಬಸವಕಲ್ಯಾಣದ ಜಿಲ್ಲೆಯಾದ ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವ ಆಗಿದ್ದು ನನ್ನ ಪುಣ್ಯ ಎಂದು ಶಂಕರ ಪಾಟೀಲ ಹೇಳಿದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group