ಭಾರತ ಬಂದ್: ಮಾನವ ಸರಪಳಿ ನಿರ್ಮಿಸಿ ರೈತರ ಪ್ರತಿಭಟನೆ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಸಿಂದಗಿ: ರೈತವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿರುವ ಸರಕಾರದ ನೀತಿಯನ್ನು ಖಂಡಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಗಾರರು ಭಾರತ್ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಪಟ್ಟಣದ ಡಾ. ಅಂಬೇಡ್ಕರ ವೃತ್ತದಲ್ಲಿ ರೈತಪರ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಜಮಾಯಿಸಿ ಮಾನವ ಸರಪಳಿ ನಿರ್ಮಿಸಿ ಆ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ರಂಜುಣಗಿ ಮಾತನಾಡಿ, ಕೇಂದ್ರ ಸರಕಾರ ರೈತರಿಗೆ ಮಾರಕವಾಗುತ್ತಿರುವ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದು ಕೃಷಿ ಕ್ಷೇತ್ರವನ್ನು ಬಂಡವಾಳಶಾಹಿಗಳ ತೆಕ್ಕೆಗೆ ನೀಡಲು ಮುಂದಾಗಿದೆ, ವಿದ್ಯುತ್ ಖಾಸಗಿಕರಣದ ಮೂಲಕ ಕೃಷಿ ಪಂಪಸೆಟ್‍ಗಳಿಗೆ ಉಚಿತ ವಿದ್ಯುತ್ ನಿಲ್ಲಿಸಲು ಮೀಟರ್ ಅಳವಡಿಸಲು ಯತ್ನಿಸುತ್ತಿದೆ. ರೈತರ ಅನುಕೂಲಕ್ಕೆ ಬೇಕಾದ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲ ನಿಗದಿ ಮಾಡುವಾಗ ಶಾಸನಬದ್ಧವಾದ ಖಾತ್ರಿ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸುತ್ತಿದ್ದರೂ ಕೇಂದ್ರ ಸರಕಾರ ನಿರ್ಲಕ್ಷ್ಯ ಧೋರಣೆ ತಾಳುತ್ತಿದೆ. ಈ ಎಲ್ಲ ವಿಚಾರಗಳ ಬಗ್ಗೆ ಕಳೇದ 10 ತಿಂಗಳಿಂದ ದೇಶದ 500 ಕ್ಕೂ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಸಂಯುಕ್ತ ಕಿಸಾನ್ ಮೋರ್ಚಾ ಹೆಸರಿನಲ್ಲಿ 10 ತಿಂಗಳಿನಿಂದ ನಿರಂತರ ಹೋರಾಟ ನಡೆಸುತ್ತಾ 600ಕ್ಕೂ ಹೆಚ್ಚು ರೈತರು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ್ದಾರೆ ಆದರೆ ಇದನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಇಂತಹ ಸರಕಾರ ಇದ್ದರೆಷ್ಟು ಬಿಟ್ಟರೆಷ್ಟು ಮುಂಬರುವ ದಿನಗಳಲ್ಲಿ ರೈತರ ಶಾಪ ತಟ್ಟದೆ ಇರದು ಎಂದು ಕಿಡಿಕಾರಿದರು.

ಪ್ರಾಂತ ರೈತಸಂಘದ ಅಧ್ಯಕ್ಷ ಅಣ್ಣಾಯ ಈಳಗೇರ ಮಾತನಾಡಿ, ದೇಶದ ಎಲ್ಲ ರೈತರಿಗೆ ಕಾಮಧೇನು ಕಲ್ಪವೃಕ್ಷವಾದ ಕಬ್ಬು ಬೆಳೆಯಿಂದ ಕಾರ್ಖಾನೆಗಳು ಎಲ್ಲ ಉತ್ಪನ್ನಗಳನ್ನು ಪಡೆದು ಡಬಲ್ ಹಣ ಸಂಗ್ರಹ ಮಾಡುತ್ತಿದೆ ಆದಾಗ್ಯೂ ರೈತರ ಖರ್ಚುಗಳನ್ನು ಡಬಲ್ ಮಾಡಿ ರೈತರ ಬದುಕು ಹಾಳು ಮಾಡುತ್ತ ಕಾರ್ಖಾನೆ ಮಾಲೀಕರು ಸಾಹುಕಾರಿಗಳಾಗುವಂತೆ ಮಾಡಿ ರೈತರ ವ್ಯವಸ್ಥೆಯನ್ನೆ ಕೇಂದ್ರ ಸರಕಾರ ದ್ರೋಹ ಬಗೆಯುತ್ತಿದೆ. ಅಲ್ಲದೆ ಕಬ್ಬು ಬೆಳೆಗಾರರಿಗೆ ನಿರಂತರ ಶೋಷಣೆ ನಡೆಯುತ್ತಿದ್ದರು ಕೂಡಾ ಕಾರ್ಖಾನೆಗಳ ಮಾಲೀಕರ ಮಾತಿಗೆ ಸರಕಾರಗಳು ಜೋತು ಬಿದ್ದು ಪ್ರತಿ ಕ್ವಿ.ಗೆ ಬರೀ ರೂ 5 ಏರಿಕೆ ಮಾಡಿ ರೈತರಿಗೆ ದ್ರೋಹ ಬಗೆದಿದೆ. ರೈತರಿಗೆ ಎಫ್.ಅರ್.ಪಿ ಪ್ರಕಾರ ಪ್ರತಿ ಟನ್‍ಗೆ 3200 ನೀಡಬೇಕು ಆದರೆ 1900 ಮಾತ್ರ ನೀಡಿ ಇನ್ನುಳಿದ ಹಣ ಬಾಕಿ ಉಳಿಸಿಕೊಂಡು ರೈತರನ್ನು ಮೂಲೆಗೆ ತಳ್ಳಿ ಶಾಸಕರು ಮಂತ್ರಿಗಳು ಸೇರಿ ರೈತರ ಸಮಾಧಿ ಕಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ರೈತವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು, ಕಬ್ಬಿಗೆ ಎಫ್.ಆರ್.ಪಿ ಬೆಲೆ ಅವೈಜ್ಞಾನಿಕವಾಗಿದ್ದು ಮರು ಪರಿಶೀಲನೆ ಮಾಡಿ 3500 ದರ ನಿಗದಿ ಪಡಿಸಬೇಕು, ರಸಗೊಬ್ಬರ ಗ್ಯಾಸ್, ಡಿಸೆಲ್, ಇತರೆ ಅಗತ್ಯವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು, ಕಳೆದ ವರ್ಷ ಭೀಮಾನದಿ ಪ್ರವಾಹದಿಂದ ಮುಳುಗಡೆಯಾದ ಬೆಳೆ ಪರಿಹಾರ ಕೂಡಲೆ ನೀಡಬೇಕು ಸೇರಿದಂತೆ ರೈತರಿಗೆ ದ್ರೋಹ ಬಗೆಯುತ್ತಿರುವ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕಬೇಕು ಎಂದು ತಾಲೂಕಾಧ್ಯಕ್ಷ ಧರೇಪ್ಪ ಬಿರಾದಾರ, ಚಂದ್ರಕಾಂತ ಬೂದಿಹಾಳ, ಧರ್ಮಣ್ಣ ಯಂಟಮಾನ, ಸರಸ್ವತಿ ಮಠ, ಮಲಕಪ್ಪ ಜೋಗುರ, ಸಂತೋಷ ಬಸಗೊಂಡ, ದೌಲತರಾಯ ಬಿರಾದಾರ, ಶ್ರೀಶೈಲ ಪಾಟೀಲ, ಬಾಬು ಕೂಡಿ, ಪರಮಾನಂದ ಚಾಂದಕವಟೆ, ಸೇರಿದಂತೆ ವಿವಿಧ ಗ್ರಾಮಗಳ ರೈತರು ಆಗ್ರಹಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!