spot_img
spot_img

ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ

Must Read

spot_img
- Advertisement -

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ೧೦೧ನೇ ಅನ್ನದಾಸೋಹ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ ೧೦೧ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು.

ಮುಖ್ಯ ಅತಿಥಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಅವರು ಮಾತನಾಡಿ, ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ. ಲಯನ್ಸ್ ಕ್ಲಬ್‌ವು ರೋಗಿಗಳಿಗೆ ಅನ್ನದಾಸೋಹ ಕಾರ್ಯವು ಶ್ಲಾಘನೀಯ ಕೆಲಸ ಮಾಡುತ್ತಲಿದೆ’ ಎಂದು ಹೇಳಿದರು.

- Advertisement -

ಬಸವರಾಜ ಮತ್ತು ಕಿರಣ ಕುದರಿ ಸಹೋದರರು ತಮ್ಮ ತಂದೆ ಗೂಳಪ್ಪ, ತಾಯಿ ಶಾಂತವ್ವ ಅವರ ಪುಣ್ಯಸ್ಮರಣೆ ನಿಮಿತ್ತವಾಗಿ ಅನ್ನದಾಸೋಹವನ್ನು ಮಾಡಿದ್ದರು. ಹಿರಿಯಜ್ಜಿ ಈರವ್ವ ಬಸಪ್ಪ ಕುದರಿ ದಾಸೋಹಕ್ಕೆ ಚಾಲನೆ ನೀಡಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಸಂಜಯ ಮೋಕಾಶಿ ಪ್ರಾಸ್ತಾವಿಕ ಮಾತನಾಡಿದರು.

ಲಯನ್ಸ್ ಕ್ಲಬ್ ಸದಸ್ಯರಾದ ವೆಂಕಟೇಶ ಸೋನವಾಲಕರ, ಶ್ರೀಶೈಲ್ ಲೋಕನ್ನವರ, ಸಂಜಯ ಶಿಂಧಿಹಟ್ಟಿ, ಪುಲಕೇಶ ಸೋನವಾಲಕರ, ಗಿರೀಶ ಆಸಂಗಿ, ಸಂದೀಪ ಸೋನವಾಲಕರ, ಶಿವಲಿಂಗ ಪಾಟೀಲ ಭಾಗವಹಿಸಿದ್ದರು.
೩೫೦ಕ್ಕೂ ಅಧಿಕ ಸಂಖ್ಯೆಯಲ್ಲಿ ಅನ್ನದಾಸೋಹದಲ್ಲಿ ಭಾಗವಹಿಸಿದ್ದರು.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group