ಮೂಡಲಗಿ : ಹುಬ್ಬಳ್ಳಿಯ ಬಣಗಾರ ಸಮಾಜದವತಿಯಿಂದ ಪ್ರಸಕ್ತ 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಉನ್ನತ ವ್ಯಾಸಂಗ ಮಾಡಿದವರನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಹುಬ್ಬಳಿಯ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಸಭಾ ಭವನದಲ್ಲಿ ಜೂನ 9ರಂದು ಭಾನುವಾರ ಮುಂಜಾನೆ 10.30ಕ್ಕೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೂಡಲಗಿ ಬಣಗಾರ ಸಮಾಜದ ಅಧ್ಯಕ್ಷ ಆನಂದ ಮಿರ್ಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ,
ಗದಗನ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಸಮಾಜದ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗುವುದು ಶೇ. 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಅಧ್ಯಕ್ಷ ಅನೀಲ ಕವಿಶೆಟ್ಟಿ . 9880377314, ಕಾರ್ಯದರ್ಶಿ ಶ್ರೀಶೈಲ ಜೋಡಳ್ಳಿ-9448113248 ಸಂಘಟನಾ ಕಾರ್ಯದರ್ಶಿ ಅನಿಲ ಮೂರಶಿಳ್ಳಿ 9448267742 ಗೆ ವಾಟ್ಸಾಪ್ ಮೂಲಕ ಜೂನ 6 ರೊಳಗಾಗಿ ಕಳುಹಿಸಬೇಕು ಹಾಗೂ ಈ ಕಾರ್ಯಕ್ರಮಕ್ಕೆ ಸಮಾಜದ ಬಾಂಧವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕಾರ್ಯದರ್ಶಿ ಶಿವಾನಂದ ಮುಧೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ,