ಉಕ್ರೇನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸನ್ಮಾನ

Must Read

ಬೀದರ – ಯುದ್ಧಗ್ರಸ್ತ ಉಕ್ರೇನ್ ನಿಂದ ತಾಯಿನಾಡಿಗೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ನಿಂದ ಸನ್ಮಾನಿಸಲಾಯಿತು.

ಅಮಿತ್, ವೈಷ್ಣವಿ, ಶಶಂಕ ಹಾಗೂ ವಿವೇಕ್ ಎಂಬ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸತ್ಕರಿಸಲಾಯಿತು. ಡಿಸಿ, ಎಸ್ಪಿ ಹಾಗೂ ಜಿಪಂ ಸಿಇಓ ಜೊತೆ ಉಕ್ರೇನ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು ಸಂವಾದ ಕೂಡ ಹಮ್ಮಿಕೊಳ್ಳಲಾಗಿತ್ತು.ಡಿಸಿ ಗೋವಿಂದ್ ರೆಡ್ಡಿ,ಎಸ್ಪಿ ಕಿಶೋರ್ ಬಾಬು ಹಾಗೂ ಜಿಪಂ ಸಿಇಓ ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಉಕ್ರೇನ ನಲ್ಲಿ ಸಿಲುಕಿದಾಗ ಅಲ್ಲಿನ ಸ್ಥಿತಿಯ ಬಗ್ಗೆ ತಮ್ಮ ಅನುಭವಗಳನ್ನು ನಾಲ್ಕು ಜನ ವಿದ್ಯಾರ್ಥಿಗಳು ಹಂಚಿಕೊಂಡರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group